Karunadu Studio

ಉತ್ತರ ಕರ್ನಾಟಕ ಕರ್ನಾಟಕ

ಭೀಕರ‌ ಅಪಘಾತ ಒಂದೇ ಕುಟುಂಬದ 3 ಮಂದಿ‌ ಸಾವು

ಧಾರವಾಡದ ಸಂಪಿಗೆನಗರದಲ್ಲಿ‌
ಆಟೋರಿಕ್ಷಾಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ 3 ಮಂದಿ‌ ಸಾವನ್ನಪ್ಪಿದ್ದಾರೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯರು ಕೆಲಗೇರಿ ಬಳಿ ಪ್ರತಿಭಟನೆ ನಡೆಸಿ ರಸ್ತೆ‌ ಬಂದ್ ಮಾಡಿ‌ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಿನ ನಡೆದ ಅಪಘಾತದಲ್ಲಿ ಆಟೋಚಾಲಕ ಮಾರುತಿ ದುರ್ಗಪ್ಪ ಹಂಚಿನಮನಿ, ಮರೆವ್ವ ನಿಂಗಪ್ಪ ಹಂಚಿನಮನಿ ಸಾವಿಗೀಡಾಗಿದ್ದು, ತದನಂತರ ಚಿಕಿತ್ಸೆ ಫಲಿಸದೇ ಪ್ರಣವ ರವಿ
ಹಂಚಿನಮನಿ ಎಂಬ 6 ವರ್ಷದ ಬಾಲಕ ಆಸ್ಪತ್ರೆಯಲ್ಲಿ
ಕೊನೆಯುಸಿರೆಳೆದಿದ್ದಾನೆ.

ಘಟನೆಯಲ್ಲಿ ಗಾಯಗೊಂಡಿರುವ ಇನ್ನೊಂದು ಮಗುವಿನ ಸ್ಥಿತಿಯೂ ಚಿಂತಾಜನಕವಾಗಿದೆ. ಪ್ರಕರಣದಿಂದ ರೋಸಿ ಹೋದ ಸ್ಥಳೀಯರು ರಸ್ತೆ ತಡೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು.

ಶಾಸಕ ಅರವಿಂದ ಬೆಲ್ಲದ್ ಸ್ಥಳಕ್ಕೆ ಆಗಮಿಸಿ, ಜನರ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದರು. ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಕೂಡ ಆಗಮಿಸಿದ್ದರು

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »