ಬೆಳಗಾವಿ
ತಹಶಿಲ್ದಾರ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಪ್ರಮುಖರ ಹೆಸರು ತಳುಕು ಹಾಕಿಕೊಂಡಿದೆ. ತಹಶಿಲ್ದಾರ, ಹೆಬ್ಬಾಳ್ಕರ ಪಿಎ ಸೇರಿ ಮೂರು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಎಸ್‌ಡಿಎ ರುದ್ರೇಶ ತಾಯಿ ಮಲ್ಲವ್ವ ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲು ಮಾಡಲಾಗಿದೆ.
ತಹಶೀಲ್ದಾರ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪಿಎ ಸೋಮು ಮತ್ತು ಸಹೋದ್ಯೋಗಿ ಅಶೋಕ ಕಬ್ಬಲಿಗೇರ ಮೇಲೆ ಕೇಸ್ ದಾಖಲು ಮಾಡಲಾಗಿದೆ.
ಬೆಳಗಾವಿ ನಗರದ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಾಟ್ಸಪ್ ನಲ್ಲಿ ನನ್ನ ಸಾವಿಗೆ ಮೂರು ಜನ ಕಾರಣ ಅಂತಾ ಬರೆದು ರುದ್ರೇಶ, ನಿನ್ನೆ ಬೆಳಗ್ಗೆ ತಹಶೀಲ್ದಾರ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.