ಧಾರವಾಡ
ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಧಾರವಾಡ ನಗರದ ಗಾಂಧಿನಗರ ಬಡಾವಣೆಯಲ್ಲಿನ ಮನೆಗೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿ, ಆಸ್ತಿ ದಾಖಲೆಗಳ ಪರಿಶೀಲನೆ ಮಾಡಿದರು.
ಇದರ ಜೋತೆ ಜೋತೆಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿ ಮತ್ತು ಉಗರಗೋಳ ಗ್ರಾಮದ ಪಾರ್ಮಹೌಸ್ ಹಾಗೂ ಗದಗ ಜಿಲ್ಲೆಯ ನರಗುಂದದ ಅಳಿಯನ ಮನೆಯ ಮೆಲೂ ಲೋಕಾಯುಕ್ತ ದಾಳಿ ನಡೆಯಿತು.
ಗೋವಿಂದಪ್ಪ ಸೇರಿದಂತೆ, ಇತರೇಡೆಗೆ ಆತನ ಸಹೋದರ ನಿವಾಸ ಸೇರಿ 5 ಕಡೆ ಲೋಕಾಯುಕ್ತ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನ ಪರಿಶಿಲನೆ ಮಾಡಲಾಯಿತು.