ಬೆಳಗಾವಿ
ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಅವಿರೋಧ ಆಯ್ಕೆ ವಿಚಾರವಾಗಿ ಹಿರಿಯರ ಅಭಿಪ್ರಾಯ ತೆಗೆದುಕೊಂಡು ಆಯ್ಕೆ ಮಾಡಿದ್ದೇವೆ ಎಂದು ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಬಿಜೆಪಿ, ಕಾಂಗ್ರೆಸ್ ದವರು ಗೆದ್ದು ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣಕ್ಕೆ. ಹೆಚ್ಚಿನ ಅನುದಾನ ತರಲು ಅನುಕೂಲ ಆಗುತ್ತೆ ಅಂತಾ ಕುಲಗೋಡೆ ಆಯ್ಕೆ ಮಾಡಲಾಗಿದೆ. ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಅಧ್ಯಕ್ಷ ಆಗಬೇಕು ಅಂತಾ ಇತ್ತು. ರಮೇಶ್ ಕತ್ತಿ ಅವರು ಪೋನ್ ನಲ್ಲಿ ಅಭಿಪ್ರಾಯ ಹೇಳಿದ್ದರು. ಸವದಿಯವರು ಕೂಡ ಅಭಿಪ್ರಾಯ ಹೇಳಿದ್ರೂ. ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ಸತೀಶ ಜಾರಕಿಹೊಳಿ, ರಮೇಶ ಜಾರಕಿಹೊಳಿ, ಕೋರೆಯವರು, ಸವದಿಯವರು ಸಹಕಾರ ಕೊಟ್ಟಿದ್ದಾರೆ ಎಂದರು.
ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆ ವಿಚಾರವಾಗಿ ಮಾತನಾಡಿ, ಉಪಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ನಿಖಿಲ, ಶಿಗ್ಗಾಂವಿಯಲ್ಲಿ ಬಿಜೆಪಿ ಗೆಲ್ಲಲು ಅವಕಾಶ ಇದೆ. ಸಂಡೂರಿನಲ್ಲಿ ಸ್ವಲ್ಪ ಕಷ್ಟ ಇದೆ ಎಂದ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.