ಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ (೭೩) ಅಮೆರಿಕದಲ್ಲಿ ವಿಧಿವಶರಾಗಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಜಾಕಿರ್ ಹುಸೇನ್ ಅವರು ಭಾರತೀಯ ಕಾಲಮಾನ ರವಿವಾರ ರಾತ್ರಿ ೧೦ ಗಂಟೆಗೆ ವಿಧಿವಶರಾಗಿದ್ದಾರೆ.
