ಬೆಳಗಾವಿ
ಸರ್ಕಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಮಾಡುವ ವ್ಯವಧಾನವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಅಧಿವೇಶನದ ಕಲಾಪಕ್ಕೂ ಮುನ್ನ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಆರಂಭಕ್ಕೂ ಮುನ್ನ ವಿಪಕ್ಷ ಒತ್ತಾಯ ಮಾಡಿತ್ತು. ಇಂದು ಮತ್ತು ನಾಳೆ ಈ ಬಗ್ಗೆ ಚರ್ಚೆ ಮಾಡುವುದಾಗಿ ಸಭಾಧ್ಯಕ್ಷರು ಭರವಸೆ ನೀಡಿದ್ದಾರೆ. ಆದ್ರೆ ಈ ನಡುವೆ ಆಡಳಿತ ಪಕ್ಷದ ಮುಖಂಡರು ಯಾವುದೇ ಚರ್ಚೆ ಮಾಡುವುದಕ್ಕೆ ತಯಾರಿಲ್ಲ ಎಂದು ದೂರಿದರು.
ನನ್ನ ಬಗ್ಗೆ ಮುನಿರತ್ಮ ಬಗ್ಗೆ ಚರ್ಚೆ ಮಾಡುವ ಕುರಿತು ಸಚಿವರು, ಶಾಸಕರು ಮುಂದಾಗಿದ್ದಾರೆ. ಆದ್ರೆ ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸದನದಲ್ಲಿ ಉತ್ತರ ಕರ್ನಾಟಕಭಾಗದ ಚರ್ಚೆ ಮಾಡೇ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಕಬ್ಬುಬೆಳೆಗಾರರು, ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಗುಲ್ಬರ್ಗಾ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ತೊಗರೆ ಬೆಳೆ ನಾಶವಾಗಿದೆ. ರೈತರಿಗೆ ಪರಿಹಾರ ನೀಡುವ ವಿಚಾರವಾಗಿ ಸರ್ಕಾರ ಮುಂದಾಗಬೇಕು ಎಂದರು.
ತಮ್ಮ ಮೇಲಿನ 150 ಕೋಟಿ ಆರೋಪ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಪ್ರಿಯಾಂಕ ಖರ್ಗೆ ಸದನದಲ್ಲಿ ಆರೋಪ ಮಾಡಿದ್ದಾರೆ. ಇದರಬಗ್ಗೆ ನಾನು ಸದನದಲ್ಲೇ ಉತ್ತರ ನೀಡುತ್ತೇನೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
