Karunadu Studio

ಉತ್ತರ ಕರ್ನಾಟಕ ಕರ್ನಾಟಕ ಬೆಳಗಾವಿ ರಾಜಕೀಯ ರಾಜ್ಯ ಸುದ್ದಿ

ಬೆಳಗಾವಿ ಅಧಿವೇಶನ ಶತಮಾನೋತ್ಸವ; ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿ.ಕೆ. ಶಿವಕುಮಾರ

ಬೆಳಗಾವಿ

ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಅಂದು 1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಹಾರ ಲಾಲ ನೆಹರು ಹಾಗೂ ಕರ್ನಾಟಕದವರಾದ ಗಂಗಾಧರ ದೇಶಪಾಂಡೆ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರಿಬ್ಬರು ಸೇರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಮಾಡಿದರು ಎಂದರು.

ಇಲ್ಲಿಂದ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದರು. 2023ರ ಚುನಾವಣೆ ಸಮಯದಲ್ಲಿ ಇದೇ ಜಾಗದಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿ ನಮ್ಮ ಹೋರಾಟ ಮಾಡಿದೆವು. ನಂತರ ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆದ್ದು ಸುಭದ್ರ ಸರ್ಕಾರ ಸ್ಥಾಪಿಸಿದೆವು ಎಂದು ಹೇಳಿದರು.

ಮತ್ತೆ ಇದೇ ಭೂಮಿಯಿಂದ ದೇಶ ಹಾಗೂ ರಾಜ್ಯವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯಬೇಕು ಎಂದು ತೀರ್ಮಾನ ಮಾಡಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಈಗಿನ ಕಾಲಘಟ್ಟದಲ್ಲಿ ದೇಶ ಹಾಗೂ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ದೇಶದ ಎಲ್ಲಾ ಪ್ರಮುಖ ನಾಯಕರು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದರು.

ಸುವರ್ಣ ಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷಕ್ಕೂ ಆಹ್ವಾನ ಇದೆಯೇ ಎಂದು ಕೇಳಿದಾಗ, ವಿರೋಧ ಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲಾ ಪಕ್ಷಗಳ ಶಾಸಕರು ಹಾಗೂ ಪರಿಷತ ಸದಸ್ಯರು ಸೇರಿ ಎಲ್ಲಾ ಪಕ್ಷಗಳಿಗೂ ಆಹ್ವಾನ ನೀಡಲಾಗುವುದು. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ.  ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆಹ್ವಾನ ಇರುವುದಿಲ್ಲ. ಬೆಳಗಾವಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರೆ ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗುವುದು ಎಂದು ತಿಳಿಸಿದರು.

ದೇಶದಾದ್ಯಂತ ಎಷ್ಟು ಜನ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ ಎಂದು ಕೇಳಿದಾಗ, ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಪ್ರಮುಖ 500ರಿಂದ 600 ಜನ ಕಾಂಗ್ರೆಸ್ ನಾಯಕರು ಮಾತ್ರ ಆಗಮಿಸುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಸಂಸದರು ಆಗಮಿಸಲಿದ್ದಾರೆ. ಇವರೆಲ್ಲರೂ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಿತಿಯ ಸದಸ್ಯರು ಮಾತ್ರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »