ಬೆಳಗಾವಿ
ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವ ಸಮಾರಂಭದ ನಿಮಿತ್ಯ ಬೆಳಗಾವಿಯಲ್ಲಿ ಡಿಸೆಂಬರ್ 26 ಮತ್ತು 27ರಂದು ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಗಾಂಧಿ ಭಾರತ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 26 ಮತ್ತು 27ರಂದು ಎರಡು ದಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ ತಾಲೂಕಿನ ಶೈಕ್ಷಣಿಕ ವಲಯದ ಪ್ರಾಥಮಿಕ ಮತ್ತು ಫ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ..
ಬೆಳಗಾವಿ ನಗರ ಮತ್ತು ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನಿತ ರಹಿತ ಶಾಲೆಗಳಿಗೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
