ಬೆಳಗಾವಿ
ನೇಣು ಬೀಗಿದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸವಿತಾ ಮಾರುತಿ ಜೋಗಾಣಿ 32 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮನೆಯ ಮೊದಲ ಮಹಡಿಯ ಬೆಡ್ ರೂಮ್ ನಲ್ಲಿ ವೇಲ್ʼನಿಂದ ನೇಣುಹಾಕಿಕೊಂಡ ಸವಿತಾ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಕ್ಷಣವೇ ಸವಿತಾಳನ್ನ ಚಿಕಿತ್ಸೆ ಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದ್ರೆ ಸವಿತಾ ಮೃತಪಟ್ಟಿದ್ದಾಳೆ ಅಂತಾ ಆಸ್ಪತ್ರೆ ವೈದ್ಯರಿಂದ ಮಾಹಿತಿ ಬಂದಿದೆ.
ಆತ್ಮಹತ್ಯೆ ಬಗ್ಗೆ ಗೃಹಿಣಿ ತಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಬೀಮ್ಸ್ ಆಸ್ಪತ್ರೆ ಶವಾಗಾರ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಸವಿತಾ ತಾಯಿ ಭಾರತಾ ಮೋರೆಯಿಂದ ಆತ್ಮಹತ್ಯೆ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಪತಿ ಮಾರುತಿ ಜೊತೆಗೆ ಸವಿತಾ ಮದುವೆ ಆಗಿ 6 ವರ್ಷ ತುಂಬಿತ್ತು. ಸವಿತಾ ದಂಪತಿಗೆ ನಾಲ್ಕು ವರ್ಷದ ಗಂಡು ಮಗುವಿದೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಬೀಮ್ಸ್ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

