ಬೆಳಗಾವಿ
ಗೆಳೆಯರೊಟ್ಟಿಗೆ ಪಾರ್ಟಿಗೆ ಹೋಗಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಗ್ರಾಮದ ಬಳಿಯ ರೆಸಾರ್ಟ್ ಗೆ ಸ್ನೇಹಿತರೊಂದಿಗೆ ಹೋಗಿದ್ದ ಬೆಳಗಾವಿ ನಗರದ ಖಾಸಬಾಗ ನಿವಾಸಿ ಮಹಾಂತೇಶ ಗುಂಜಿಕರ (26) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.
ನಿನ್ನೆ ಗೆಳೆಯರೊಟ್ಟಿಗೆ ಪಾರ್ಟಿ ಮಾಡಲು ಹೋಗಿದ್ದ ಮಹಾಂತೇಶ ಈಜು ಕೊಳದಲ್ಲಿ ಮುಳುಗಿ ಸಾವು ಸಂಭವಿಸಿದೆ ಎಂದು ಸ್ನೇಹಿತರು ಹೇಳಿದ್ದಾರೆ.
ಇಪ್ಪತ್ತಕ್ಕೂ ಅಧಿಕ ಜನರು ಸೇರಿಕೊಂಡು ಪಾರ್ಟಿಗೆ ಹೋಗಿದ್ದರು. ಇಷ್ಟೊಂದು ಜನ ಇದ್ದಾಗ ಒಬ್ಬನೇ ಸಾಯಲು ಹೇಗೆ ಸಾಧ್ಯ, ಗೆಳೆಯರೇ ಮಹಾಂತೇಶಗೆ ಎನೋ ಮಾಡಿದ್ದಾರೆ ಅಂತಾ ಆತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಮ್ಸ್ ಆಸ್ಪತ್ರೆಗೆ ಮಹಾಂತೇಶ ಶವವನ್ನು ತೆಗೆದುಕೊಂಡು ಬರಲಾಗಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಪೊಲೀಸರ ಜೊತೆಗೆ ಮಹಾಂತೇಶ ಸಂಬಂಧಿಕರ ವಾಗ್ವಾದ ಏರ್ಪಟ್ಟಿದೆ.
ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ದೂರು ಕೊಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ. ಆಸ್ಪತ್ರೆಗೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
