ಬೆಳಗಾವಿ
ಬೆಳ್ಳಂಬೆಳಗ್ಗೆ ಬೆಳಗಾವಿಯಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಹಶೀಲ್ದಾರ ಪ್ರಕಾಶ ಗಾಯಕವಾಡ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಬೆಳಗಾವಿ ನಗರದ ಲಕ್ಷ ಟೆಕ್ ಬಳಿ ಇರುವ ಮನೆ, ನಿಪ್ಪಾಣಿ, ಖಾನಾಪುರ ಸೇರಿದಂತೆ 6 ಕಡೆ ದಾಳಿ ಮಾಡಿದ್ದಾರೆ.
ಲೋಕಾಯುಕ್ತ ಎಸ್ಪಿ ಹನುಮಂತರಾಯಪ್ಪ ನೇತೃತ್ವದ ತಂಡದಿಂದ ದಾಳಿ ಮಾಡಲಾಗಿದೆ. ಮನೆ, ಕಚೇರಿಯಲ್ಲಿನ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.




