ಚಿಕ್ಕೋಡಿ
ನಿಯಂತ್ರಣ ತಪ್ಪಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಘಟನೆ ನಡೆದಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಓವರ್ ಲೋಡ್ ಮಾಡಿಕೊಂಡು ಕಬ್ಬು ತುಂಬಿಕೊಂಡು ಹೋಗುವಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಹಾರೂಗೇರಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ರಸ್ತೆ ಬದಿಯಲ್ಲಿದ್ದ ಅಂಗಡಿ ಮೇಲೆ ಟ್ರ್ಯಾಕ್ಟರ್ ಉರುಳು ಬಿದ್ದ ಹಿನ್ನೆಲೆ ಸಾಕಷ್ಟು ಹಾನಿಯುಂಟಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಅಂಗಡಿಕಾರರು ಪಾರಾಗಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
