Karunadu Studio

ಕರ್ನಾಟಕ

Central Bank of India Recruitment: ಪದವಿ ವಿದ್ಯಾರ್ಹತೆ ಹೊಂದಿದವರಿಗೆ ಗುಡ್‌ನ್ಯೂಸ್‌; ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿದೆ ಬರೋಬ್ಬರಿ 1,000 ಹುದ್ದೆ – Kannada News | Central Bank of India Recruitment 2025 – Apply Online for 1000 Credit Officer posts


ಬೆಂಗಳೂರು: ನೀವು ಪದವಿ ವಿದ್ಯಾರ್ಹತೆ ಹೊಂದಿದ್ದಿರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ದೇಶಾದ್ಯಂತ ಸುಮಾರು 4,500ಕ್ಕೂ ಹೆಚ್ಚು ಶಾಖೆ ಹೊಂದಿರುವ, ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ (Central Bank of India) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Central Bank of India Recruitment 2025). ದೇಶೀಯ ಮಟ್ಟದಲ್ಲಿ ಒಟ್ಟು 1,000 ಹುದ್ದೆ ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆ. 20 ಕೊನೆಯ ದಿನ (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕ್ರೆಡಿಟ್‌ ಆಫೀಸರ್‌ (ಅಸಿಸ್ಟಂಟ್‌ ಮ್ಯಾನೇಜರ್‌) ಹುದ್ದೆ ಇದ್ದಾಗಿದ್ದು, ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದ ಆಸಕ್ತರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಮಹಿಳಾ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 175 ರೂ. ಪಾವತಿಸಬೇಕು. ಇತರ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಅನ್ನು ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆಯು ಇಂಗ್ಲಿಷ್‌ ಭಾಷೆ, ಬ್ಯಾಂಕಿಂಗ್‌ ನಾಲೆಡ್ಜ್‌, ಕಂಪ್ಯೂಟರ್‌ ನಾಲೆಡ್ಜ್‌, ಪ್ರೆಸಂಟ್‌ ಎಕಾನಾಮಿಕ್‌ ಮತ್ತು ಜನರಲ್ ಎವರ್ನೆಸ್‌ ಮುಂತಾದ ವಿಷಯಗಳ ಪ್ರಶ್ನೆಗಳನ್ನು ಒಳಗೊಂಡಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರವಿದೆ. ನೆಗೆಟಿವ್‌ ಅಂಕಗಳಿಲ್ಲ. ಆಯ್ಕೆಯಾದವರಿಗೆ 48,480 ರೂ. – 85,920 ರೂ. ಮಾಸಿಕ ವೇತನ ದೊರೆಯಲಿದೆ.

Central Bank of India Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
(
https://ibpsonline.ibps.in/cbicojan25/)

* ಹೆಸರು ನೋಂದಾಯಿಸಿ.

* ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.

* ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

* ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.

* ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.

* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಅದಿಕೃತ ವೆಬ್‌ಸೈಟ್‌ ವಿಳಾಸ:centralbankofindia.co.inಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: Central Bank of India Recruitment 2025: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿದೆ 266 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »