Karunadu Studio

ಕರ್ನಾಟಕ

Vishwavani Editorial: ಬಾಲ್ಯ ವಿವಾಹಗಳಿಗೆ ಕಡಿವಾಣ ಬೀಳಲಿ – Kannada News | Stop child marriages


ಕಳೆದ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ಬರೋಬ್ಬರಿ 33621 ಬಾಲ್ಯ ವಿವಾಹಗಳು ನಡೆದಿವೆ ಎಂಬ ವರದಿಯಾಗಿದೆ. ಅದರಲ್ಲಿ ಬೆಂಗಳೂರಿನಲ್ಲೇ ಅತಿ ಹೆಚ್ಚು (4324) ಬಾಲ್ಯ ವಿವಾಹಗಳು ನಡೆದಿವೆ ಎಂಬುದು ವಿಪರ್ಯಾಸದ ಸಂಗತಿ.

ಹೆಣ್ಣು ಹೆತ್ತವರು ಬಹಳ ಬೇಗ ಜವಾಬ್ದಾರಿ ಕಳೆದುಕೊಳ್ಳುವ ಉದ್ದೇಶದಿಂದ ಹಾಗೂ ಹೆಣ್ಣು ಮಕ್ಕಳು ಹಾದಿ ತಪ್ಪಿದರೆ ಎಂಬ ಭೀತಿಯಿಂದ ಪ್ರಾಪ್ತ ವಯಸ್ಸಿಗೆ ಬರುವ ಮುನ್ನವೇ ವಿವಾಹ ಮಾಡಲಾಗುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಆರ್ಥಿಕ ಸಂಕಷ್ಟ, ಸಾಲದ ಕಾರಣಕ್ಕೆ ಹದಿನೈದು-ಹದಿನಾರು ವರ್ಷದ ಬಾಲಕಿಯರನ್ನು 35-37 ವರ್ಷದ ವರನಿಗೆ ಕೊಟ್ಟು ಮದುವೆ ಮಾಡುತ್ತಿರುವ ಸಂಗತಿಗಳೂ ಬೆಳಕಿಗೆ ಬಂದಿವೆ.

ಇದನ್ನೂ ಓದಿ: Editorial: ಕಾಲ್ತುಳಿತ: ವಾಸ್ತವ ಸ್ಥಿತಿ ತಿಳಿಸಿ

ಬಾಲ್ಯ ವಿವಾಹವನ್ನು ತಡೆಗಟ್ಟುವಲ್ಲಿ ರಾಜ್ಯ ಸರಕಾರ ಹಲವು ಕ್ರಮ ಕೈಗೊಂಡಿದ್ದರೂ ಬಾಲ್ಯ ವಿವಾಹಗಳು ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿಲ್ಲವೆಂದಾದರೆ ಸಾರ್ವಜನಿಕರಲ್ಲಿ ಈ ಕುರಿತು ಇನ್ನಷ್ಟು ಜಾಗೃತಿ ಅಗತ್ಯವಿದೆ. ಬಾಲ್ಯ ವಿವಾಹ ತಡೆ, ಪೋಕ್ಸೋ ಪ್ರಕರಣಗಳ ತಡೆಗೆ ಕೆಳಮಟ್ಟ ದಲ್ಲಿ ಕೆಲಸ ಮಾಡುವ ಆಶಾ, ಅಂಗನವಾಡಿ ಕಾರ್ಯಕರ್ತೆ, ಗ್ರಾಪಂ ಪಿಡಿಒ ಹಾಗೂ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ.

ಆದ್ದರಿಂದ ಇವರ ಕಾರ್ಯವೈಖರಿ ಬದಲಾಗಬೇಕಿದೆ. ಹಾಗಾಗಿ ಗ್ರಾಮಗಳಲ್ಲಿ ಶಾಲೆ ಬಿಟ್ಟ ಮಕ್ಕಳ ಬಗ್ಗೆ ನಿಗಾ ವಹಿಸಬೇಕು. ಅವರನ್ನು ಮರಳಿ ಶಾಲೆಗೆ ದಾಖಲಿಸಲು ಪಾಲಕರ ಮನವೊಲಿಸಬೇಕು. ಜನರಿಗೆ ಕಾನೂನುಗಳ ಬಗ್ಗೆ ಮನದಟ್ಟು ಮಾಡಬೇಕು. ಆ ಮೂಲಕ ಬಾಲ್ಯವಿವಾಹ ತಡೆಗೆ ಶ್ರಮಿಸ ಬೇಕು. ಬಾಲ್ಯ ವಿವಾಹವನ್ನು ತಡೆದ ಮಾತ್ರಕ್ಕೆ ಕರ್ತವ್ಯ ಮುಗಿಯುವುದಿಲ್ಲ, ಅವರ ಜತೆ ನಿರಂತ ಸಂಪರ್ಕದಲ್ಲಿರಬೇಕು.

ಬಾಲ್ಯವಿವಾಹದಿಂದ ಬಚಾವಾದ ಯುವತಿಯ ಶೈಕ್ಷಣಿಕ ಪ್ರಗತಿಯತ್ತ ಗಮನ ಹರಿಸಬೇಕು. ಅನೇಕ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಅಽಕಾರಿಗಳ ಮೇಲೆ ಸ್ಥಳೀಯ ರಾಜಕಾರಣಿಗಳು, ಮುಖಂಡರ ಒತ್ತಡ ಇರುತ್ತದೆ. ಅಂತಹ ಯಾವುದೇ ಒತ್ತಡಕ್ಕೆ ಮಣಿಯದೇ ಕಾರ್ಯನಿರ್ವಹಿಸಬೇಕು. ಈ ನಿಟ್ಟಿ ನಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತರು ಮತ್ತು ಪಿಡಿಒಗಳು ಸಮನ್ವಯದಿಂದ ಕೆಲಸ ಮಾಡ ಬೇಕು. ಆಗ ಮಾತ್ರ ಬಾಲ್ಯವಿವಾಹದಂತಹ ಪಿಡುಗನ್ನು ಹೋಗಲಾಡಿಸಲು ಸಾಧ್ಯ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »