Karunadu Studio

ಕರ್ನಾಟಕ

Road Accident: ಭೀಕರ ರಸ್ತೆ ಅಪಘಾತ; ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ 8 ಮಂದಿ ಬಲಿ – Kannada News | 8 die after car-bus collide on Jaipur-Ajmer highway


ಜೈಪುರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ (Maha Kumbh)ಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್‌ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್‌ ಹೆದ್ದಾರಿಯ ದುಡು (Dudu) ಎಂಬಲ್ಲಿ ಅಪಘಾತ ನಡೆದಿದೆ. ಕಾರು ಭಿಲ್ವಾರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರೆ, ಬಸ್‌ ಜೈಪುರದಿಂದ ಜೋಧಪುರಕ್ಕೆ ಹೋಗುತ್ತಿತ್ತು. ಬಸ್‌ನಲ್ಲಿ 30ರಿಂದ 40 ಪ್ರಯಾಣಿಕರಿದ್ದರು. ಗುರುವಾರ (ಫೆ. 6) ಅಪರಾಹ್ನ 3.30ರ ವೇಳೆ ಈ ಅಪಘಾತ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಕಾರಣವೇನು?

ʼʼಗುರುವಾರ ಅಪರಾಹ್ನ 3.30ರ ವೇಳೆ ಅಪಘಾತ ನಡೆದಿದೆ. ಟೈರ್‌ ಸ್ಫೋಟಗೊಂಡ ಕಾರಣ ನಿಯಂತ್ರಣ ಕಳೆದುಕೊಂಡ ಬಸ್‌ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದು ಜೈಪುರ ರೂರಲ್‌ ಎಸ್‌ಪಿ ಆನಂದ್‌ ಶರ್ಮಾ ಮಾಹಿತಿ ನೀಡಿದ್ದಾರೆ. ಮೃತರನ್ನು ಭಿಲ್ವಾರದ ಕೊಟ್ರಿ ಪ್ರದೇಶದ ನಿವಾಸಿಗಳಾದ ದಿನೇಶ್ ರೇಗರ್, ಸುರೇಶ್ ರೇಗರ್, ರವಿಕಾಂತ್ ರೇಗರ್, ಬಾಬು ರೇಗರ್, ಬಬ್ಲು ಮೇವಾರ, ಕಿಶನ್ ಲಾಲ್, ನಾರಾಯಣ ಬೈರ್ವಾ ಮತ್ತು ಪ್ರಮೋದ್ ಸುತಾರ್ ಎಂದು ಗುರುತಿಸಲಾಗಿದೆ.



ʼʼರೇಗರ್ ಕುಟುಂಬಸ್ಥರು ಮತ್ತು ಅವರ ಕೆಲವು ಸ್ನೇಹಿತರು ಮಹಾ ಕುಂಭಮೇಳದಲ್ಲಿ ಭಾಗವಹಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಯಿತುʼʼ ಎಂದು ಶರ್ಮಾ ಹೇಳಿದ್ದಾರೆ. ಅಪಘಾತದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಚಾಲಕ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಬಸ್ ಓಡಾಟಕ್ಕೆ ಯೋಗ್ಯವಾಗಿತ್ತೇ? ಚಾಲಕನ ಕಡೆಯಿಂದ ಯಾವುದೇ ನಿರ್ಲಕ್ಷ್ಯ ಸಂಭವಿಸಿದೆಯೇ ಎಂಬುದನ್ನು ನಾವು ಪರಿಶೀಲಿಸುತ್ತಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಶರ್ಮಾ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Mahakumbh Stampede: ಮಹಾ ಕುಂಭಮೇಳದ ಕಾಲ್ತುಳಿತ; ಹೇಗಾಯ್ತು ಈ ದುರಂತ?

ಕುಂಭಮೇಳದಿಂದ ಮರಳುತ್ತಿದ್ದ 5 ನೇಪಾಳಿ ಪ್ರಜೆಗಳ ದುರ್ಮರಣ

ಪಾಟ್ನಾ: ಕೆಲವು ದಿನಗಳ ಹಿಂದೆ ಬಿಹಾರದಲ್ಲಿ ಕಾರು ಪಲ್ಟಿಯಾಗಿ ಕುಂಭಮೇಳದಿಂದ ಮರಳುತ್ತಿದ್ದ 5 ನೇಪಾಳಿ ಪ್ರಜೆಗಳು ಮೃತಪಟ್ಟಿದ್ದರು. ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಇವರು ಸಂಚರಿಸುತ್ತಿದ್ದ ಕಾರು ರಸ್ತೆ ಬಿಭಜಕಕ್ಕೆ ಡಿಕ್ಕಿ ಹೊಡೆದು ಫೆ. 1ರಂದು ಅಪಘಾತ ಸಂಭವಿಸಿತ್ತು. ಮಧುಬನಿ ಚತುಷ್ಪಥ ಹೆದ್ದಾರಿಯಲ್ಲಿ ಸ್ಟಂಟ್‌ ಮಾಡುತ್ತಿದ್ದ ಬೈಕರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಕಾರು ಚಾಲಕನ ನಿಯಂತ್ರಣ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದರು

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಸುಮಾರು 5 ಸುತ್ತು ತಿರುಗಿ ಪಲ್ಪಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಕಾರಿನಲ್ಲಿ ಒಟ್ಟು 9 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಇನ್ನುಳಿದ ನಾಲ್ವರು ಗಾಯಗೊಂಡಿದ್ದರು. ʼʼಚತುಷ್ಪಥ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ಬಂದ ಕೆಲವರು ಸ್ಟಂಟ್‌ ಮಾಡುತ್ತಿದ್ದರು. ವೇಗವಾಗಿ ಸಾಗುತ್ತಿದ್ದ ಕಾರು ಬೈಕ್ ಸವಾರರಲ್ಲಿ ಒಬ್ಬರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದಿದೆʼʼ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು. ಅಪಘಾತ ನಡೆಯುತ್ತಿದ್ದಂತೆ ಸ್ಟಂಟ್‌ ನಡೆಸುತ್ತಿದ್ದ ಬೈಕರ್‌ಗಳು ಸ್ಥಳದಿಂದ ಪರಾರಿಯಾಗಿದ್ದರು.





Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »