ಬೆಂಗಳೂರು:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ತಿಂಗಳು ಈ ಅರ್ಜಿಯ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ದರ್ಶನ್ ಅವರ ಕಾನೂನು ತಂಡ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಸಂಪರ್ಕಿಸಿದೆ ಎನ್ನಲಾಗಿದೆ.
ಮಾರ್ಚ್ 18ರಂದು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ ನಡೆಯಲಿದೆ. ಹೈಕೋರ್ಟ್‌ನಲ್ಲಿ ಗೆಲುವು ಪಡೆದಂತೆ ಸುಪ್ರೀಂ ಕೋರ್ಟ್ನಲ್ಲಿಯೂ ಗೆಲುವು ಪಡೆಯಲು ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ದರ್ಶನ್ ಕುಟುಂಬ ಕಪಿಲ್ ಸಿಬಲ್ ಅವರನ್ನು ಭೇಟಿಯಾಗಿದ್ದು, ಹೈಕೋರ್ಟ್‌ನಲ್ಲಿ ನಡೆದ ವಾದ-ಪ್ರತಿವಾದ ಹಾಗೂ ಪ್ರಕರಣದ ಸಮಗ್ರ ಮಾಹಿತಿಯನ್ನು ಅವರಿಗೆ ನೀಡಲಾಗಿದೆ ಎನ್ನಲಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು.