Karunadu Studio

ಕರ್ನಾಟಕ

ಕೆಎಎಸ್ ಮುಖ್ಯ ಪರೀಕ್ಷೆಗೆ ಹೊರಡಿಸಿದ್ದ ಅಧಿಸೂಚನೆಗೆ KAT ತಡೆ….!


ಬೆಂಗಳೂರು:

    ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ನಡೆಸುತ್ತಿರುವ 2023-24ನೇ ಸಾಲಿನ ಗ್ರೂಪ್ ಎ ಮತ್ತು ಬಿ ವೃಂದದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆಗೆ ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ಮತ್ತೆ ತಡೆ ನೀಡಿದೆ.

    ಪವಿತ್ರ ಮತ್ತಿತರ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಂಗ ಸದಸ್ಯ ಎಸ್.ವೈ.ವಟವಟಿ ಮತ್ತು ಆಡಳಿತ ಸದಸ್ಯೆ ಡಾ.ಅಮಿತಾ ಪ್ರಸಾದ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿದೆ.

    ಕಳೆದ ಜನವರಿ 30ರಂದು ಪೂರ್ವಭಾವಿ ಪರೀಕ್ಷಾ ಫಲಿತಾಂಶ ಪ್ರಕಟಿಸಿ ನೇಮಕ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿದ್ದ ಕೆಎಟಿ ಇದೀಗ ಮುಖ್ಯ ಪರೀಕ್ಷೆ ನಡೆಸಲು ಆಯೋಗ ಜನವರಿ 29ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಮುಂದಿನ ವಿಚಾರಣೆವರೆಗೆ ಅಮಾನತ್ತಿನಲ್ಲಿಡಲು ಆದೇಶಿಸಿದೆ.

    ಮೇಲ್ನೋಟಕ್ಕೆ ಪ್ರಶ್ನೆಪತ್ರಿಕೆಗಳನ್ನು ಆಂಗ್ಲಭಾಷೆಯಿಂದ ಕನ್ನಡ ಭಾಷೆಗೆ ಅನುವಾದ ಮಾಡುವಾಗ ದೋಷಗಳಾಗಿರುವುದು ಕಂಡುಬಂದಿದೆ ಮತ್ತು ಆಯೋಗವೂ ಕೂಡ ಅದನ್ನು ಒಪ್ಪಿಕೊಂಡು ಆ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚನೆ ಮಾಡಿತ್ತು. ವರದಿ ಸಲ್ಲಿಸಿರುವ ಸಮಿತಿ, ಪ್ರಶ್ನೆ ಪತ್ರಿಕೆ ಭಾಷಾಂತರದಲ್ಲಿ ದೋಷಗಳಾಗಿವೆ ಎಂಬುದನ್ನು ದೃಢಪಡಿಸಿದೆ. ಅಲ್ಲದೆ, ಈ ವಿಚಾರವನ್ನು ಬಗೆಹರಿಸುವಂತೆ ಸಮಿತಿ ವರದಿಯಲ್ಲಿ ಸಲಹೆ ನೀಡಿತ್ತು. ಹಿಂದಿನ ಈ ದೋಷಗಳನ್ನು ಸರಿಪಡಿಸದೆ ಹೇಗೆ ಕೆಪಿಎಸ್ಸಿ ಮುಖ್ಯ ಪರೀಕ್ಷೆಯನ್ನು ನಡೆಸಲು ಅಧಿಸೂಚನೆ ಹೊರಡಿಸಿದೆ ಎಂದು ಪೀಠ ಪ್ರಶ್ನಿಸಿದೆ.

    ಅಲ್ಲದೆ, ಈ ಸಂದರ್ಭದಲ್ಲಿ ಮುಖ್ಯ ಪರೀಕ್ಷೆಗೆ ಕೆಪಿಎಸ್ಸಿ ಹೊರಡಿಸಿರುವ ಅಧಿಸೂಚನೆಯನ್ನು ಅಮಾನತಿಯಲ್ಲಿಡುವುದೇ ಸೂಕ್ತ. ಹಾಗಾಗಿ ಜ.29ರಂದು ಆಯೋಗ ಮುಖ್ಯಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿ ಹೊರಡಿಸಿರುವ ಆದೇಶವನ್ನು ಮುಂದಿನ ವಿಚಾರಣೆವರೆಗೆ ಅಮಾನಲ್ಲಿಡುವಂತೆ ಆಯೋಗಕ್ಕೆ ನಿರ್ದೇಶನ ನೀಡಿ ಆದೇಶಿಸಿದೆ.

    ಕಳೆದ ಆ.27ರಂದು ಕೆಪಿಎಸ್ಸಿ 384 ಕೆಎಎಸ್ ಹುದ್ದೆಗಳ ನೇಮಕಕ್ಕೆ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಅದರಲ್ಲಿ 2.10 ಲಕ್ಷ ಅರ್ಜಿ ಸಲ್ಲಿಸಿದ್ದವರ ಪೈಕಿ 1.31 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷೆಯ ಪ್ರಶ್ನೆಪತ್ರಿಕೆ ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡುವಲ್ಲಿ ಲೋಪಗಳು ಉಂಟಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸುವಂತೆ ಅಭ್ಯರ್ಥಿಗಳು ಆಯೋಗದ ಮೇಲೆ ಒತ್ತಡ ಹಾಕಿದ್ದರು. ಕೊನೆಗೆ ರಾಜ್ಯ ಸರ್ಕಾರವೇ ಆಯೋಗಕ್ಕೆ ಪೂರ್ವಭಾವಿ ಪರೀಕ್ಷೆ ರದ್ದುಗೊಳಿಸಿ ಹೊಸದಾಗಿ ಪರೀಕ್ಷೆ ಬರೆಯಲು ಆದೇಶ ನೀಡಿತ್ತು.

   ಅದರಂತೆ, ಆಯೋಗ ಡಿ.29ಕ್ಕೆ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ 553 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಿತ್ತು. 2.10 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ 1.05 ಲಕ್ಷ (ಶೇ.47.7) ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅ ಪರೀಕ್ಷೆಯಲ್ಲೂ ಸುಮಾರು 59 ಪ್ರಶ್ನೆಗಳ ಅನುವಾದದಲ್ಲಿ ದೋಷಗಳಾಗಿವೆ. ಹಾಗಾಗಿ, ಪರೀಕ್ಷೆ ರದ್ದುಗೊಳಿಸಬೇಕು ಎಂದು ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು.

    ಈ ನಡುವೆ ಕೆಪಿಎಸ್ಸಿ ಮೂರು ಬಾರಿ ಕೀ ಉತ್ತರಗಳನ್ನು ಬಿಡುಗಡೆ ಮಾಡಿದ್ದಲ್ಲದೆ, ಪ್ರಶ್ನೆಗಳಿಗೆ ನೀಡಿದ್ದ ಉತ್ತರದಲ್ಲಿಯೇ ಲೋಪಗಳಾಗಿದ್ದರಿಂದ ಅಭ್ಯರ್ಥಿಗಳಿಗೆ 5 ಕೃಪಾಂಕಗಳನ್ನು ನೀಡುವುದಾಗಿ ಪ್ರಕಟಿಸಿತ್ತು. ಆನಂತರ ಆಯೋಗ ಫೆ.10ರಂದು ಪೂರ್ವಭಾವಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿ, 1:15 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಿತ್ತು. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »