ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,
ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕರ್ನಾಟಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಲ್ಯ ಮಿಷನ್, ರಾಯಚೂರು. ಇವರು ಸಂಕಲ್ಪ ಯೋಜನೆಯಡಿ ಇದೇ ದಿನಾಂಕ ಮಾರ್ಚ್ 1 ರಂದು ಹೊಸ ಆಡಿಟೋರಿಯಂ, ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ, ರಾಯಚೂರಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿರುತ್ತಾರೆ. ಯಾವುದೇ ವಿದ್ಯಾರ್ಹತೆ ಹೊಂದಿದ ಉದ್ಯೋಗ ಆಕಾಂಕ್ಷಿಗಳು ಕ್ಯೂಆರ್ ಕೋಡ್ ಮೂಲಕ ನೊಂದಣಿ ಮಾಡಿಕೊಂಡು ದಿನಾಂಕ 1/3/2025 ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ.