Karunadu Studio

ಕರ್ನಾಟಕ

ಹೆಚ್ಎ​ಸ್​ಆರ್​ಪಿ ನಂಬರ್​ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ಸರ್ಕಾರ


ಬೆಂಗಳೂರು

    ರಾಜ್ಯದಲ್ಲಿನ ಹಳೇ ವಾಹನಗಳಿಗೆ ಹೆಚ್​ಎಸ್​ಆರ್​ಪಿ  ನಂಬರ್​​ ಪ್ಲೇಟ್ ಅಳವಡಿಸಲು ಮತ್ತೊಮ್ಮೆ ಗಡುವು ವಿಸ್ತರಣೆಯಾಗಿದೆ. ಮಾರ್ಚ್​ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ 6 ಬಾರಿ ಹೆಚ್​ಎಸ್​ಆರ್​ಪಿ ನಂಬರ್​​ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆಯಾಗಿದೆ.

     ಜನವರಿ 31ರವರೆಗೆ ನಂಬರ್​​ ಪ್ಲೇಟ್ ಅಳವಡಿಕೆಗೆ ಗಡುವು ನೀಡಲಾಗಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ ಮಾರ್ಚ್​ 31ರವರೆಗೆ ಗಡುವು ವಿಸ್ತರಿಸಿದೆ. ಕರ್ನಾಟಕದಲ್ಲಿ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳಿವೆ. ಇದರಲ್ಲಿ 58 ಲಕ್ಷ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿವೆ. 2019ರ ಏಪ್ರಿಲ್​ 1ರ ಹಿಂದಿನ ಎಲ್ಲ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಸಿಕೆ ಕಡ್ಡಾಯವಾಗಿದೆ.

    ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

   ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ. 

  • ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
  • ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  • ಹೆಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
  • ಹೆಚ್‌ಎಸ್‌ಆರ್‌ಪಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  • ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
  • ನಿಮ್ಮ ಅನುಕೂಲಕ್ಕೆ, ತಕ್ಕಂತೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
  • ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
  • ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ ಹೆಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ಆಯ್ಕೆ ಮಾಡಬಹುದು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »