ಬೆಂಗಳೂರು:
2013ರ ವಿಧಾನಸಭಾ ಚುನಾವಣೆ ವೇಳೆ ನಡೆದಿದ್ದ ಕೆಜಿಎಫ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಚಿವ ಕೆ.ಹೆಚ್ ಮುನಿಯಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು (Bail) ಮಂಜೂರು ಮಾಡಿದೆ. ಪದೇ ಪದೆ ನ್ಯಾಯಾಲಯಕ್ಕೆ ಗೈರು ಹಾಜರಾಗುತ್ತಿದ್ದ ಮುನಿಯಪ್ಪ ಅವರಿಗೆ ನ್ಯಾಯಾಲಯ ಬಂಧನ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ಮುನಿಯಪ್ಪ ಅವರು ಕೋರ್ಟ್‌ಗೆ ಧಾವಿಸಿ ಬಂದಿದ್ದು, ನಂತರ ಕೋರ್ಟ್ ಅವರಿಗೆ ಜಾಮೀನು ನೀಡಿದೆ.
ಅಂದು ಕೆಜಿಎಫ್‍ನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿ.ಶಂಕರ್ ಮೇಲೆ ಅಂದು ಸಂಸದರಾಗಿದ್ದ ಮುನಿಯಪ್ಪ ಹಾಗೂ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಮುನಿಯಪ್ಪ ಗೈರಾಗುತ್ತಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗದಿದ್ದರೆ ಬಂಧನ ವಾರೆಂಟ್ ಹೊರಡಿಸುವುದಾಗಿ ನ್ಯಾಯಮೂರ್ತಿ ಗಜಾನನ ಭಟ್ ಎಚ್ಚರಿಕೆ ನೀಡಿದ್ದರು. ಬಳಿಕ ಲಕ್ಷ್ಮೀ ನಾರಾಯಣ್ ಮತ್ತು ಮುನಿಯಪ್ಪ ಇಬ್ಬರೂ ನ್ಯಾಯಾಧೀಶರ ಮುಂದೆ ಹಾಜರಾದರು. ವಿಚಾರಣೆ ವೇಳೆ ನ್ಯಾಯಾಧೀಶರು 50 ಸಾವಿರ ರೂಪಾಯಿ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಿದರು.