Karunadu Studio

ಕರ್ನಾಟಕ

ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ಕೊಡಿ: ಸಂತೋಷ್‌ ಲಾಡ್‌


ಶಿವಮೊಗ್ಗ:

    ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ರಾಜ್ಯ ಸರ್ಕಾರಕ್ಕೆ ಬುಧವಾರ ಒತ್ತಾಯಿಸಿದ್ದಾರೆ.

    ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠಾ ಸೇವಾ ಸಂಘ ಇತ್ತೀಚೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಮರಾಠಾ ಸಮುದಾಯದ ವೆಬ್‌ಸೈಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65ರಷ್ಟು ಮೀಸಲಾತಿ ಇದೆ. ಅಂತೆಯೇ ನಮ್ಮ ರಾಜ್ಯದಲ್ಲಿಯೂ ಶೋಷಿತ ವರ್ಗಗಳು ಮತ್ತು ಅಹಿಂದ ವರ್ಗಗಳ ಎಲ್ಲಾ ಹಿಂದುಳಿದ ಸಮುದಾಯಗಳು ಅಭಿವೃದ್ಧಿಯಾಗಬೇಕು. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ವರ್ಗದವರಿಗೆ ಶೇ.75ರಷ್ಟು ಮೀಸಲಾತಿ ನೀಡಬೇಕು ಎಂದು ಹೇಳಿದರು.

   2ಎ ಅಡಿಯಲ್ಲಿ ಮೀಸಲಾತಿ ನೀಡುವಂತೆ ಹಲವು ಸಮುದಾಯಗಳು ಬೇಡಿಕೆ ಇಡುತ್ತಿವೆ. ಹೀಗಾಗಿ ಮೀಸಲಾತಿಯಲ್ಲಿ ಶೇಕಡಾವಾರು ಹೆಚ್ಚಳವಾಗಬೇಕು. ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಒದಗಿಸಬೇಕು. ತಮಿಳುನಾಡು 9ನೇ ತಿದ್ದುಪಡಿ ಮಾಡಿಕೊಂಡು ಮೀಸಲಾತಿ ಹೆಚ್ಚಿಸಿದೆ. ನಮ್ಮ ರಾಜ್ಯದಲ್ಲಿಯೂ ಎಲ್ಲಾ ಶೋಷಿತ ವರ್ಗಗಳು ಅಭಿವೃದ್ಧಿಯಾಗಬೇಕೆಂದರೆ ರಾಜ್ಯ ಸರ್ಕಾರದ ವತಿಯಿಂದ ಶೇ.75 ರಷ್ಟು ಮೀಸಲಾತಿ ಘೋಷಿಸಿ, ನಮ್ಮಲ್ಲೂ ಅಂತಹ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »