Karunadu Studio

ಕರ್ನಾಟಕ

ಇಂದೇ ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ; ಯಾವ ಜಾಗ ಫೈನಲ್?


ಬೆಂಗಳೂರು :

   ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. 

  ಈ ಸಂದರ್ಭದಲ್ಲಿ ಸಚಿವ ಎಂ ಬಿ ಪಾಟೀಲ್ ಅವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು. ಇಂದು ಈ ತಂಡ ನೆಲಮಂಗಲ- ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ ಎಂದು ಸಚಿವರಾದ ಎಂ ಬಿ ಪಾಟೀಲ್ ಅವರು ಮಾಹಿತಿ ನೀಡಿದರು. ಅಲ್ಲದೇ ಕನಕಪುರ ಬಳಿ ಎರಡು ಜಾಗಗಳಲ್ಲಿ ಒಂದು ಜಾಗ ಬಹುತೇಕ ಆಯ್ಕೆಯಾಗಲಿದೆ.

   ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವ ಎಂ ಬಿ ಪಾಟೀಲ್ ಅವರು ತಿಳಿಸಿದರು. ಇನ್ನೂ, ಬಿಡದಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಸೂಕ್ತ ಅಲ್ಲ. ಈ ಜಾಗವನ್ನು ಬಿಟ್ಟು ಈ ಎರಡು ಜಾಗಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಕನಕಪುರದ ಹಾರೋಹಳ್ಳಿ ಬಳಿ ಒಂದು ಜಾಗ ನೋಡಿದ್ದೇವೆ. ಕುಣಿಗಲ್ ರಸ್ತೆ ಬಳಿ ಒಂದು ಜಾಗ ನೋಡಿದ್ದೇವೆ. ಇವು ವಿಧಾನಸೌಧಕ್ಕೆ 50 ಕಿ.ಮೀ ದೂರ ಇವೆ. ಕೇಂದ್ರ ಅಧ್ಯಯನ ತಂಡ ಮೂರು ದಿನಗಳ ಕಾಲ ಸ್ಥಳ ಪರಿಶೀಲನೆ ನಡೆಸಲಿವೆ. ನಂತರ ದೆಹಲಿಗೆ ತೆರಳಿ ಸ್ಥಳಗಳ ಬಗ್ಗೆ ವರದಿ ನೀಡುತ್ತಾರೆ ಎಂದರು. ಇನ್ನು ದೆಹಲಿಯಿಂದ ನಮಗೆ ಸ್ಥಳ ವರದಿ ಬರಬೇಕು. ಆಮೇಲೆ ನಾವು ಸಮಗ್ರ ಯೋಜನಾ ವರದಿ (DPR) ಮಾಡಬೇಕಾಗುತ್ತದೆ ಎಂದರು.

   ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು.

  ಪ್ರಾಧಿಕಾರದ ತಂಡದಲ್ಲಿ ಜನರಲ್ ಮ್ಯಾನೇಜರ್ ವಿಕ್ರಮ್ ಸಿಂಗ್, ಜಂಟಿ ಜನರಲ್ ಮ್ಯಾನೇಜರ್ ಕೆ. ಶ್ರೀನಿವಾಸರಾವ್, ಸಹಾಯಕ ಜನರಲ್ ಮ್ಯಾನೇಜರ್ ಮನುಜ್ ಭಾರದ್ವಾಜ್, ಪ್ರಧಾನ ಕಚೇರಿಯ ಅಧಿಕಾರಿಗಳಾದ ಸಚ್ಚಿದಾನಂದ್, ಸಂತೋಷಕುಮಾರ್ ಭಾರತಿ, ಅಮನ್ ಚಿಪಾ ಇದ್ದರು. ಸರಕಾರದ ಪರವಾಗಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಖುಷ್ಬೂ ಗೋಯಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಹಾಜರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »