ಚೆನ್ನೈ: ಎಂಎಸ್ ಧೋನಿ ನಾಯಕತ್ವದಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ಸೋಲಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಶುಕ್ರವಾರ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದಿದ್ದ ಟೂರ್ನಿಯ 25ನೇ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಸಿಎಸ್‌ಕೆ, ಎದುರಾಳಿ ಕೋಲ್ಕತಾ ನೈಟ್ ರೈಡರ್ಸ್(Kolkata Knight Riders) ವಿರುದ್ಧ 9 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ಆ ಮೂಲಕ ಹದಿನೆಂಟನೇ ಆವೃತ್ತಿಯಲ್ಲಿ ಸತತ ಐದನೇ ಸೋಲು ಅನುಭವಿಸಿತು. ಇದರೊಂದಿಗೆ ತವರು ಅಭಿಮಾನಿಗಳ ಎದುರು ಐದು ಬಾರಿ ಚಾಂಪಿಯನ್ಸ್ ಭಾರಿ ಮುಖಭಂಗ ಅನುಭವಿಸಿತು. ಆದರೆ, ಸುನೀಲ್ ನರೇನ್ ಸೇರಿದಂತೆ ಇತರೆ ಬೌಲರ್‌ಗಳ ಶಿಸ್ತುಬದ್ದ ಬೌಲಿಂಗ್ ದಾಳಿಯ ಸಹಾಯದಿಂದ ಅಜಿಂಕ್ಯ ರಹಾನೆ ನಾಯಕತ್ವದ ಕೆಕೆಆರ್, ಸಿಎಸ್‌ಕೆ ತಂಡವನ್ನು ಮಣಿಸಿ ಟೂರ್ನಿಯಲ್ಲಿ ಮೂರನೇ ಗೆಲುವನ್ನು ತನ್ನದಾಗಿಸಿಕೊಂಡಿತು.