Karunadu Studio

ಕರ್ನಾಟಕ

Bribery Case: ಲಂಚ ಪ್ರಕರಣ; ಮಾಜಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರನಿಗೆ ಕ್ಲೀನ್‌ ಚಿಟ್‌ – Kannada News | Former MLA Madal Virupakshappa’s son gets clean chit in bribery case


ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ನಿಯಮಿತ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ (Bribery Case) ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ ಮಾಡಾಳ್‌ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಪ್ರಶಾಂತ್‌ ಮಾಡಾಳ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ)ಯಲ್ಲಿ ಹಣಕಾಸು ಸಲಹೆಗಾರರಾಗಿದ್ದ ಪ್ರಶಾಂತ್‌ ಮಾಡಾಳ್‌, ಕೆಎಸ್‌ಡಿಎಲ್‌ಗೆ ಸುಗಂಧ ದ್ರವ್ಯ ಸಾಮಗ್ರಿ ಪೂರೈಸುವವರಿಂದ 40 ಲಕ್ಷ ರೂ. ಲಂಚ ಪಡೆದಿದ್ದಾರೆಂಬ ಆರೋಪವಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಶಾಂತ್‌ ಅವರು ಲಂಚದ ಹಣವನ್ನು ಸ್ವೀಕರಿಸಿದ್ದಾರೆ ಎಂಬ ವಾದವನ್ನು ಒಪ್ಪಬಹುದಾದರೂ, ಹಣಕ್ಕಾಗಿ ಬೇಡಿಕೆ ಇಟ್ಟಿರುವ ಬಗ್ಗೆ ಯಾವುದೇ ಸಾಕ್ಷ್ಯ ಇಲ್ಲ. ಕೇವಲ ಹಣ ವಶಪಡಿಸಿಕೊಂಡಿರುವ ಆಧಾರದಲ್ಲಿಯೇ ಲಂಚದ ಆರೋಪ ಹೊರಿಸುವುದು ಸರಿಯಲ್ಲ. ಅರ್ಜಿದಾರರ ವಿರುದ್ಧ ಆರೋಪ ಹೊರಿಸಲು ಯಾವುದೇ ಆಧಾರವಿಲ್ಲ ಎಂದು ಅಭಿಪ್ರಾಯಪಟ್ಟು ಆರೋಪ ಮುಕ್ತಗೊಳಿಸಿದೆ.

2023ರ ಮಾ.2ರಂದು ಕ್ರೆಸೆಂಟ್‌ ರಸ್ತೆಯ ಯೂನಿಸ್‌ ಕ್ವೇರ್‌ ಬಿಲ್ಡರ್ಸ್‌ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು 40 ಲಕ್ಷ ರೂ. ವಶಪಡಿಸಿಕೊಂಡಿದ್ದರು. ದೂರುದಾರ ಶ್ರೇಯಸ್‌ ಕಶ್ಯಪ್‌, ಕೆಎಸ್‌ಡಿಎಲ್‌ಗೆ ಸುಗಂಧ ದ್ರವ್ಯ ಸಾಮಗ್ರಿಗಳನ್ನು ಪೂರೈಸಲು ಟೆಂಡರ್‌ ಹಂಚಿಕೆ, ಖರೀದಿ ಆದೇಶಕ್ಕಾಗಿ ಲಂಚ ಸ್ವೀಕರಿಸಿದ್ದರು ಎಂದು ದೂರು ನೀಡಿದ್ದರು. ಈ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಹಣ ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಪ್ರಶಾಂತ್‌ ಮಾಡಾಳ್‌ ಇದೀಗ ದೋಷಮುಕ್ತರಾಗಿದ್ದಾರೆ.

ಈ ಸುದ್ದಿಯನ್ನೂ ಓದಿ | Congress Protest: ಬಿಜೆಪಿ ಜನಾಕ್ರೋಶ ಯಾತ್ರೆ ವಿರುದ್ಧ ಪ್ರತಿಭಟನೆ; ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »