ನವದೆಹಲಿ: ಕರುಣ್ ನಾಯರ್ (89 ರನ್) ಅವರ ಸ್ಪೋಟಕ ಅರ್ಧಶತಕದ ಹೊರತಾಗಿಯೂ ಕರಣ್ ಶರ್ಮಾ (36ಕ್ಕೆ 3) ಅವರ ಸ್ಪಿನ್ ಮೋಡಿಯ ಸಹಾಯದಿಂದ ಮುಂಬೈ ಇಂಡಿಯನ್ಸ್ ತಂಡ, 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 29ನೇ ಪಂದ್ಯದಲ್ಲಿ(MI vs DC) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ 12 ರನ್‌ಗಳ ರೋಚಕ ಗೆಲುವು ಸಾಧಿಸಿತು. ಆ ಮೂಲಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ (Mumbai Indians) ಹದಿನೆಂಟನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಗೆಲುವು ಪಡೆದುಕೊಂಡಿತು. ಆದರೆ, 19ನೇ ಓವರ್‌ವರೆಗೂ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ (Delhi capitals) ತಂಡ ಕೊನೆಯಲ್ಲಿ ಮೂರು ರನ್‌ಔಟ್‌ಗಳಿಂದಾಗಿ ಅನಿರೀಕ್ಷಿತವಾಗಿ ಸೋಲು ಒಪ್ಪಿಕೊಳ್ಳಬೇಕಾಯಿತು.