Karunadu Studio

ಕರ್ನಾಟಕ

Bike Taxi Service: ರ‍್ಯಾಪಿಡೋ, ಓಲಾ, ಉಬರ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ – Kannada News | Karnataka govt orders suspension of Rapido, Ola, Uber bike taxi services


ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ವಿಧಿಸಲು ಹೈಕೋರ್ಟ್‌ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರ‍್ಯಾಪಿಡೋ, ಓಲಾ, ಉಬರ್ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲು ರಾಜ್ಯ ಸಾರಿಗೆ ಇಲಾಖೆ ರಾಮಲಿಂಗಾ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಸಂಘಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ಏ.2ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಬೈಕ್ ಟ್ಯಾಕ್ಸಿಗಳ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ, 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಇದೀಗ ಬೈಕ್ ಟ್ಯಾಕ್ಸಿ ಸೇವೆ (Bike Taxi Service) ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.

ಸರ್ಕಾರ ಮೋಟಾರು ವಾಹನ ಕಾಯ್ದೆ, 1988ರ ಸೆಕ್ಷನ್ 3ರಡಿ ಮಾರ್ಗಸೂಚಿಗಳನ್ನು ರೂಪಿಸುವವರೆಗೆ ಬೈಕ್‌ ಟ್ಯಾಕ್ಸಿಗಳು ಕಾರ್ಯನಿರ್ವಹಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿತ್ತು. ಮುಂದಿನ 6 ವಾರಗಳ ಒಳಗಾಗಿ ರಾಜ್ಯದಲ್ಲಿರುವ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿರ್ಬಂಧಿಸುವಂತೆ ಸರ್ಕಾರಕ್ಕೆ ಆದೇಶ ನೀಡಿತ್ತು. ಅಲ್ಲದೇ ರ‍್ಯಾಪಿಡೋ, ಓಲಾ, ಉಬರ್ ಸೇರಿ ಇತರೆ ಎಲ್ಲಾ ಬೈಕ್ ಟ್ಯಾಕ್ಸಿಗಳ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ, ಇದಕ್ಕೆ ಸಂಬಂಧಿಸಿ 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು.

ಸರ್ಕಾರ ಸೂಕ್ತ ನಿಯಮಗಳನ್ನು ಜಾರಿ ಮಾಡುವವರೆಗೆ ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅಥವಾ ಅಂತಹ ಸೇವೆಗಳಿಗೆ ಪರವಾನಗಿ ನೀಡಲು ಸಾರಿಗೆ ಇಲಾಖೆ ಅನುಮತಿ ನೀಡಬಾರದು ಎಂದು ಕೋರ್ಟ್‌ ಸೂಚಿಸಿತ್ತು.

ಈ ಸುದ್ದಿಯನ್ನೂ ಓದಿ | Pahalgam Terror Attack: ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನಿಯರು ಗೂಗಲ್‌ನಲ್ಲಿ ಹುಡುಕಿದ್ದು ಏನು ಗೊತ್ತೇ ?

ರ‍್ಯಾಪಿಡೋ ಸೇರಿ ಹಲವು ಕಂಪನಿಗಳು ಯೆಲ್ಲೋ ಬೋರ್ಡ್‌ ಇಲ್ಲದೇ ಅಕ್ರಮವಾಗಿ ಬೈಕ್‌ ಟ್ಯಾಕ್ಸಿ ಸೇವೆ ನೀಡುತ್ತಿವೆ. ನಿಯಮಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಬೈಕ್‌ ಟ್ಯಾಕ್ಸಿ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಟೋ ಹಾಗೂ ಕ್ಯಾಬ್‌ ಚಾಲಕರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರು. ಇದೀಗ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್‌ ತಾತ್ಕಾಲಿಕ ನಿರ್ಬಂಧವನ್ನು ವಿಧಿಸಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »