Karunadu Studio

ಕರ್ನಾಟಕ

Karnataka Rains: ನಾಳೆ ಬಾಗಲಕೋಟೆ, ಬೆಳಗಾವಿ ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಮುನ್ಸೂಚನೆ – Kannada News | Rain likely in Bagalkot, Belagavi and other districts on 27th april 2025


ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆ ಸಿಕ್ಕಿದ್ದು, ಮುಂದಿನ 5 ದಿನ ರಾಜ್ಯದ ವಿವಿಧೆಡೆ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಏಪ್ರಿಲ್ 27‌ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್‌ 28ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 29‌ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Tourist Attractions In Kashmir: ಸದಾ ಹೈಅಲರ್ಟ್‌ ಘೋಷಿಸಿರುವ ಕಾಶ್ಮೀರದ ಐದು ಪ್ರವಾಸಿ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು?

ಏ.30ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದ‌ರ್, ಯಾದಗಿರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮೇ 1 ಮತ್ತು 2ರಂದು ಕೂಡ ಇದೇ ರೀತಿಯ ವಾತಾವರಣ ಇರಲಿದೆ.

ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಮುಂದಿನ 2 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ. ನಂತರದ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »