Karunadu Studio

ಕರ್ನಾಟಕ

Hanif Abbasi: 130 ನ್ಯೂಕ್ಲಿಯರ್‌ ಬಾಂಬ್‌ಗಳನ್ನು ಭಾರತಕ್ಕಾಗಿಯೇ ಇಡಲಾಗಿದೆ; ಪಾಕ್ ಸಚಿವ ಹನೀಫ್ ಅಬ್ಬಾಸಿ ಬಹಿರಂಗ ಬೆದರಿಕೆ – Kannada News | 130 nukes aimed at you: Pak minister’s open threat to India as tensions flare


ಇಸ್ಲಾಮಾಬಾದ್‌: ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಪಾಕಿಸ್ತಾನ ಸಚಿವ (Pak minister) ಹನೀಫ್ ಅಬ್ಬಾಸಿ (Hanif Abbasi) ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದಾರೆ. ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಸೇರಿದಂತೆ ಪಾಕಿಸ್ತಾನದ ಕ್ಷಿಪಣಿ ಶಸ್ತ್ರಾಸ್ತ್ರಗಳು ಮತ್ತು 130 ಪರಮಾಣು ಬಾಂಬ್ ಗಳನ್ನು ಭಾರತಕ್ಕಾಗಿ ಮಾತ್ರ ಇಡಲಾಗಿದೆ ಎಂದು ಅವರು ಹೇಳಿದ್ದಾರೆ. ಅವರ ಹೇಳಿಕೆಗೆ ಜಾಗತಿಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. 26 ಜನರ ಸಾವಿಗೆ ಕಾರಣವಾದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ಇತ್ತೀಚಿನ ನಿರ್ಧಾರಕ್ಕೆ ಪ್ರತಿಕ್ರಿಯೆಯಾಗಿ ಅಬ್ಬಾಸಿ ಈ ಬೆದರಿಕೆಯನ್ನು ಒಡ್ಡಿದ್ದಾರೆ.

ಭಾರತವು ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ನಿರ್ಧರಿಸಿದರೆ, ಅದು ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ಧವಾಗಬೇಕು ಎಂದು ಅಬ್ಬಾಸಿ ಬಹಿರಂಗವಾಗಿ ಘೋಷಿಸಿದ್ದಾರೆ. ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು ಕೇವಲ ಸಾಂಕೇತಿಕವಾಗಿಲ್ಲ ದೇಶಾದ್ಯಂತ ಇರಿಸಲ್ಪಟ್ಟಿವೆ ಮತ್ತು ಬಳಸಲು ಸಿದ್ಧವಾಗಿವೆ ಎಂದು ಹೇಳಿದ್ದಾರೆ. ಭಾರತ ಸರ್ಕಾರ ನಮಗೆ ನೀರು ಸರಬರಾಜನ್ನು ನಿಲ್ಲಿಸಿದರೆ, ಅವರು ಯುದ್ಧಕ್ಕೆ ಸಿದ್ಧರಾಗಿರಬೇಕು. ನಮ್ಮಲ್ಲಿರುವ ಮಿಲಿಟರಿ ಉಪಕರಣಗಳು, ನಮ್ಮಲ್ಲಿರುವ ಕ್ಷಿಪಣಿಗಳು, ಅವು ಪ್ರದರ್ಶನಕ್ಕೆ ಅಲ್ಲ. ನಾವು ದೇಶಾದ್ಯಂತ ನಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಎಲ್ಲಿ ಇರಿಸಿದ್ದೇವೆ ಎಂದು ಯಾರಿಗೂ ತಿಳಿದಿಲ್ಲ. ನಾನು ಮತ್ತೊಮ್ಮೆ ಹೇಳುತ್ತೇನೆ, ಈ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಭಾರತ ಮೇಲೆ ಗುರಿಯಾಗಿ ಇರಿಸಿದ್ದೇವೆ ಎಂದು ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.

ಈ ಸುದ್ದಿಯನ್ನೂ ಓದಿ: Most Wanted Terrorists: ಪಹಲ್ಗಾಮ್ ದಾಳಿ: ಲಷ್ಕರ್, ಜೈಶ್, ಹಿಜ್ಬುಲ್ ಭಯೋತ್ಪಾದಕರ ಹೆಸರು ಮೋಸ್ಟ್ ವಾಂಟೆಡ್ ಪಟ್ಟಿಗೆ ಸೇರ್ಪಡೆ

ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಉಂಟಾದ ಅಡಚಣೆಯನ್ನು ಉಲ್ಲೇಖಿಸಿದ ಅಬ್ಬಾಸಿ, ಕೇವಲ ಎರಡು ದಿನಗಳಲ್ಲಿ ಭಾರತೀಯ ವಾಯುಯಾನದಲ್ಲಿ ಉಂಟಾದ ಅವ್ಯವಸ್ಥೆಯ ಕುರಿತು ಅವರು ಮಾತನಾಡಿದ್ದಾರೆ. ಇನ್ನೂ 10 ದಿನಗಳ ಕಾಲ ಹೀಗೆ ಮುಂದುವರಿದರೆ, ಭಾರತದ ವಿಮಾನಯಾನ ಸಂಸ್ಥೆಗಳು ದಿವಾಳಿಯಾಗುತ್ತವೆ ಎಂದರು. ಉಗ್ರರ ದಾಳಿ ಕುರಿತು ಮಾತನಾಡಿ ಭಾರತವು ತನ್ನದೇ ಆದ ಭದ್ರತಾ ಲೋಪಗಳನ್ನು ಸರಿಪಡಿಸುವ ಬದಲು ಪಾಕಿಸ್ತಾನದ ಮೇಲೆ ಆರೋಪ ಹೊರಿಸುತ್ತಿದೆ. ಭಾರತ ನೀರು ಬಂದ್‌ ಮಾಡಿದೆ ಪಾಕಿಸ್ತಾನಕ್ಕೆ ಗೊತ್ತು ಏನು ಮಾಡಬೇಕು ಎಂದು ಹೇಳಿದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »