Karunadu Studio

ಕರ್ನಾಟಕ

Karnataka Weather: ನಾಳೆ ರಾಜ್ಯದ ಉತ್ತರ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ – Kannada News | Rainfall forecast for north and south interior Karnataka on April 30


ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾರ್ಭಟ ಜೋರಾಗಿದ್ದು, ಹಲವೆಡೆ ಸೋಮವಾರ ಉತ್ತಮ ಮಳೆಯಾಗಿದೆ. ಅದೇ ರೀತಿ ಇಂದು (ಏಪ್ರಿಲ್‌ 29) ಸಂಜೆ ಕೂಡ‌ ತುಮಕೂರು ಹಾಗೂ ಬೀದರ್ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ (Karnataka Weather) ಅಬ್ಬರಿಸುವ ಸಾಧ್ಯತೆ ಇದೆ. ಇನ್ನು ಏಪ್ರಿಲ್‌ 30ರಂದು ಬುಧವಾರ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಧವಾರ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ಮತು ಸುತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 23°C ಇರುವ ಸಾಧ್ಯತೆ ಇದೆ.

ಇನ್ನು ಮೇ 1ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆ, ಬೀದರ್, ಯಾದಗಿರಿ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಯಾದಗಿರಿ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.

ಮೇ 3ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಕಲ್ಲಂಗಡಿಯೆಂಬ ರಸಭರಿತ ಹಣ್ಣಿನ ಸತ್ವಗಳು ಗೊತ್ತೇ?

ಮೇ 4ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »