Karunadu Studio

ಕರ್ನಾಟಕ

CM Siddaramaiah: 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯ: ಸಿದ್ದರಾಮಯ್ಯ – Kannada News | CM Siddaramaiah The 15th Finance Commission is an injustice to the state says CM Siddaramaiah


ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು. ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ದವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು.

ವೇತನ‌ ಆಯೋಗ ಶಿಫಾರಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದು ತಿಳಿಸಿದರು.

11495 ಕೋಟಿ ರೂಪಾಯಿ ನೀಡದೆ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ಎಂದು ಸಿಎಂ ಆರೋಪಿಸಿದರು.

ಈ ಸುದ್ದಿಯನ್ನೂ ಓದಿ | Karnataka Rains: ಮುಂದಿನ ಎರಡು ದಿನ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ‌

ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ. ಜತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೀವಿ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೀವಿ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »