Karunadu Studio

ಕರ್ನಾಟಕ

Pahalgam Terror Attack: ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ಶಂಕಿತ ಪೊಲೀಸ್‌ ಚೇಸಿಂಗ್‌ ವೇಳೆ ನದಿಗೆ ಹಾರಿ ಸಾವು – Kannada News | Pahalgam Terror Attack: Man Who Allegedly Helped Terrorists In J&K Jumps Into River, Drowns


ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿದ್ದ (Shelter to Terrorists) ಯುವಕನೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಜಿಗಿದು ಮೃತಪಟ್ಟಿದ್ದಾನೆ. 23 ವರ್ಷದ ಇಮ್ತಿಯಾಜ್ ಅಹ್ಮದ್ ಮಾಗ್ರೇ (Imitiaz Ahmad Magray) ಎಂಬಾತ ಕಾಡಿನ ಪ್ರದೇಶವನ್ನು ಸ್ವಲ್ಪ ಹೊತ್ತು ಪರಿಶೀಲಿಸಿದ ಬಳಿಕ ಆಕಸ್ಮಿಕವಾಗಿ ಕಲ್ಲಿನಿಂದ ಕೂಡಿದ ವೇಶಾವ್ ನದಿಗೆ (Veshaw River) ಜಿಗಿಯುವ ವಿಡಿಯೋ ಬೆಳಕಿಗೆ ಬಂದಿದೆ. ಇನ್ನು ಈತ ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಹತ್ಯಾಕಾಂಡದ ಉಗ್ರರಿಗೆ ಸಹಾಯ ಮಾಡಿದ್ದ ಎನ್ನಲಾಗಿದೆ.

ಮೂಲಗಳ ಪ್ರಕಾರ, ಶನಿವಾರ ಪೊಲೀಸರು ಮಾಗ್ರೇನನ್ನು ವಶಕ್ಕೆ ತೆಗೆದುಕೊಂಡಿದ್ದರು. ವಿಚಾರಣೆ ವೇಳೆ, ಕುಲ್ಗಾಮ್‌ನ ತಂಗ್‌ಮಾರ್ಗ್‌ನ ಕಾಡಿನಲ್ಲಿ ಅಡಗಿರುವ ಭಯೋತ್ಪಾದಕರಿಗೆ ಆತ ಆಹಾರ ಮತ್ತು ಲಾಜಿಸ್ಟಿಕ್ಸ್ ಸೌಲಭ್ಯಗಳನ್ನು ಒದಗಿಸಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಆರೋಪಿಯು ಭಯೋತ್ಪಾದಕರ ಅಡಗುದಾಣಕ್ಕೆ ಭದ್ರತಾ ಪಡೆಗಳನ್ನು ಕರೆದೊಯ್ಯಲು ಒಪ್ಪಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ. ಆದರೆ, ಭಾನುವಾರ ಬೆಳಗ್ಗೆ ಪೊಲೀಸರು ಮತ್ತು ಸೇನೆಯ ಜಂಟಿ ತಂಡವನ್ನು ಅಡಗುದಾಣಕ್ಕೆ ಕರೆದೊಯ್ಯುವ ವೇಳೆ, ತಪ್ಪಿಸಿಕೊಳ್ಳಲು ಮಾಗ್ರೇ ವೇಶಾವ್ ನದಿಗೆ ಜಿಗಿದಿದ್ದಾನೆ ಎಂದು ಮೂಲಗಳು ಹೇಳಿವೆ.

ವಿಡಿಯೊ ಇಲ್ಲಿದೆ



ಆತ ತಪ್ಪಿಸಿಕೊಳ್ಳುವ ಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಆತ ಓಡಿಹೋಗುವಾಗ ಆತನ ಸಮೀಪದಲ್ಲಿ ಯಾರೂ ಇರಲಿಲ್ಲ. ವಿಡಿಯೋದಲ್ಲಿ, ಮಾಗ್ರೇ ಈಜಲು ಪ್ರಯತ್ನಿಸಿದರೂ, ತೀವ್ರ ಪ್ರವಾಹದಿಂದಾಗಿ ಕೊಚ್ಚಿಕೊಂಡು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಘಟನೆಯ ಸಂಪೂರ್ಣ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವವರನ್ನು ಭದ್ರತಾ ಪಡೆಗಳು ಖಂಡಿಸಿವೆ ಎಂದು ಮೂಲಗಳು ತಿಳಿಸಿವೆ. ಈ ವ್ಯಕ್ತಿಯ ದುರದೃಷ್ಟಕರ ಸಾವಿಗೆ ಭದ್ರತಾ ಪಡೆಗಳನ್ನು ತಪ್ಪಾಗಿ ದೂಷಿಸಬಾರದು ಎಂದು ಮೂಲಗಳು ಹೇಳಿವೆ.

ಈ ಸುದ್ದಿಯನ್ನು ಓದಿ: Pahalgam Terror Attack: ಮುಸ್ಲಿಮರ ಮೇಲೆ ದ್ವೇಷ ಸಾಧಿಸಬೇಡಿ ಎಂದ ಹಿಮಾಂಶಿಗೆ ರಾಷ್ಟ್ರೀಯ ಮಹಿಳಾ ಆಯೋಗದಿಂದ ಬೆಂಬಲ

ಇದಕ್ಕೂ ಮುನ್ನ ಭಾನುವಾರ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ ನಾಯಕಿ ಮತ್ತು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಇಮ್ತಿಯಾಜ್ ಅಹ್ಮದ್ ಮಾಗ್ರೇ ಸಾವಿನಲ್ಲಿ ಒಳಸಂಚು ಇದೆ ಎಂದು ಆರೋಪಿಸಿದ್ದರು. “ಕುಲ್ಗಾಮ್‌ನಲ್ಲಿ ಮತ್ತೊಂದು ಶವ ನದಿಯಿಂದ ಪತ್ತೆಯಾಗಿದ್ದು, ಇದರಲ್ಲಿ ಗಂಭೀರ ಕುತಂತ್ರದ ಆರೋಪಗಳಿವೆ. ಸ್ಥಳೀಯರು, ಇಮ್ತಿಯಾಜ್ ಮಾಗ್ರೇನನ್ನು ಎರಡು ದಿನಗಳ ಹಿಂದೆ ಸೇನೆ ವಶಕ್ಕೆ ತೆಗೆದುಕೊಂಡಿತ್ತು ಎಂದು ಆರೋಪಿಸಿದ್ದಾರೆ. ಈಗ ಆತನ ಶವ ರಹಸ್ಯವಾಗಿ ನದಿಯಲ್ಲಿ ಪತ್ತೆಯಾಗಿದೆ” ಎಂದು ಮುಫ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಗಡಿಯಾಚೆಗಿನ ಸಂಪರ್ಕ ಹೊಂದಿರುವ ಭಯೋತ್ಪಾದಕರಿಗೆ ಆಹಾರ ಮತ್ತು ಲಾಜಿಸ್ಟಿಕ್ಸ್ ಒದಗಿಸುತ್ತಿದ್ದ ಸ್ಥಳೀಯ ನಿವಾಸಿಯೊಬ್ಬ ಸಿಕ್ಕಿಬಿದ್ದಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಮಂದಿ ಸಿಕ್ಕಿ ಬಿದ್ದಿದ್ದರು.





Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »