Karunadu Studio

ಕರ್ನಾಟಕ

Mock drills: ಮಾಕ್‌ ಡ್ರಿಲ್‌ನಿಂದ ಬುಧವಾರದ ಐಪಿಎಲ್‌ ಪಂದ್ಯ ರದ್ದಾಗುತ್ತಾ? – Kannada News | Will Wednesday’s IPL match be canceled due to a mock drill?


ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ(Pahalgam attack) ನಂತರ ಪಾಕಿಸ್ತಾನದ(India-Pakistan war) ಜತೆ ಹೆಚ್ಚುತ್ತಿರುವ ಯುದ್ಧ ಉದ್ವಿಗ್ನತೆಯ ನಡುವೆಯೇ ಕೇಂದ್ರ ಗೃಹ ಸಚಿವಾಲಯವು ಮೇ 7ರ ಬುಧವಾರದಂದು ಪೂರ್ಣ ಪ್ರಮಾಣದ ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು (ಮಾಕ್‌ ಡ್ರಿಲ್‌)(Mock drills) ನಡೆಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ವಾಯುದಾಳಿಯ ಸಂದರ್ಭದಲ್ಲಿ ನಗರಗಳು ಮತ್ತು ಹಳ್ಳಿಗಳಲ್ಲಿ ಸಂಪೂರ್ಣ ವಿದ್ಯುತ್‌ ಕಡಿತ ಮಾಡಲಾಗುತ್ತದೆ. ರಾತ್ರಿ ವಾಹನಗಳ ಸಂಚಾರವನ್ನೂ ಸ್ಥಗಿತಗೊಳಿಸಲಾಗುತ್ತದೆ. ಇದೀಗ ಮಾಕ್‌ ಡ್ರಿಲ್‌ನಿಂದ ನಾಳಿನ ಐಪಿಎಲ್‌(IPL 2025) ಪಂದ್ಯ ರದ್ದಾಗಲಿದೆಯಾ? ಎಂಬ ಪ್ರಶ್ನೆ ಕ್ರಿಕೆಟ್‌ ಅಭಿಮಾನಿಗಳಲ್ಲಿ ಮೂಡಿದೆ.

ಸದ್ಯ ಇದುವರೆಗೂ ಬಿಸಿಸಿಐ ಅಥವಾ ಐಪಿಎಲ್‌ ಕ್ರಿಕೆಟ್‌ ಮಂಡಳಿ ಮಾಕ್‌ ಡ್ರಿಲ್‌ನಿಂದ ನಾಳಿನ ಐಪಿಎಲ್‌ ಪಂದ್ಯ ರದ್ದಾಗುವ ಕುರಿತು ಯಾವುದೇ ಅಧಿಕೃತ ಮಾಹಿ ನೀಡಿಲ್ಲ. ಹೀಗಾಗಿ ಪಂದ್ಯ ನಡೆಯುವುದು ಖಚಿತವಾಗಿದೆ. ಬುಧವಾರ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ಕೆಕೆಆರ್‌ ಮತ್ತು ಚೆನ್ನೈ ಕಾದಾಟ ನಡೆಸಲಿದೆ.

1971ರ ಬಾಂಗ್ಲಾ ವಿಮೋಚನಾ ಯುದ್ಧದ ಬಳಿಕ ಭಾರತದಲ್ಲಿ ಇಂಥ ತಾಲೀಮು ನಡೆಯುತ್ತಿರುವುದು ಇದೇ ಮೊದಲು.‌ ಈ ತಾಲೀಮಿನ ವೇಳೆ ಯುದ್ಧದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ವಿಧಾನವನ್ನು ಅಭ್ಯಸಿಸಲು ಸೂಚಿಸಲಾಗಿದೆ. ಕವಾಯತು ಸಮಯದಲ್ಲಿ ವಾಯುದಾಳಿ ಎಚ್ಚರಿಕೆ ಸೈರನ್‌ಗಳನ್ನು ಸಕ್ರಿಯಗೊಳಿಸಲಾಗುತ್ತದೆ ಮತ್ತು ನಾಗರಿಕರು ಮತ್ತು ವಿದ್ಯಾರ್ಥಿಗಳಿಗೆ ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕೆಂದು ತರಬೇತಿ ನೀಡಲಾಗುತ್ತದೆ.

ಭಾನುವಾರವಷ್ಟೆ ಯುದ್ಧದ ಪರಿಸ್ಥಿತಿಯನ್ನು ಎದುರಿಸುವ ತಾಲೀಮಿನ ಭಾಗವಾಗಿ, ಪಂಜಾಬ್‌ನ ಫಿರೋಜ್‌ಪುರದ ಕಂಟೋನ್ಮೆಂಟ್ ಪ್ರದೇಶದಲ್ಲಿ ರಾತ್ರಿ 9 ರಿಂದ 9.30ರವರೆಗೆ ವಿದ್ಯುತ್‌ ಕಡಿತ ಮಾಡಿ ‘ಬ್ಲ್ಯಾಕೌಟ್‌ ಡ್ರಿಲ್‌’ ನಡೆಸಲಾಗಿತ್ತು. ಈ ವೇಳೆ ವಾಹನ ಸಂಚಾರವನ್ನೂ ನಿಲ್ಲಿಸಿ ಅವುಗಳ ಲೈಟ್‌ ಆಫ್‌ ಮಾಡಲಾಗಿತ್ತು.

ಇದನ್ನೂ ಓದಿ Mock Drills: ಇಂಡಿಯಾ-ಪಾಕ್‌ ಯುದ್ಧ ಗ್ಯಾರಂಟಿ? ನಾಳೆ ದೇಶಾದ್ಯಂತ ಮಾಕ್‌ ಡ್ರಿಲ್‌

ನೆರೆಯ ರಾಷ್ಟ್ರ ಚೀನಾ ಮತ್ತೆ ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿದೆ. ‘ದಕ್ಷಿಣ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗಾಗಿ ನಾವು ಸದಾ ಪಾಕಿಸ್ತಾನ ಬೆಂಬಲಿಸುತ್ತೇವೆ’ ಎಂದು ಅದು ಹೇಳಿದೆ. ಇನ್ನೊಂದೆಡೆ ಪಾಕಿಸ್ತಾನ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಸತತವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಲೇ ಇದೆ. ಹೀಗಾಗಿ ಭಾರತ-ಪಾಕ್‌ ಮಧ್ಯೆ ಯುದ್ಧದ ಕಾರ್ಮೋಡ ಹೆಚ್ಚುತ್ತಲೇ ಇದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »