Karunadu Studio

ಕರ್ನಾಟಕ

Karnataka Weather: ಮುಂದಿನ 3 ದಿನ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ – Kannada News | heavy rainfall is likely to occur in karnataka for the next 3 days


ಬೆಂಗಳೂರು: ಮುಂದಿನ ಮೂರು ದಿನ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮೇ 12ರವರೆಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ (Karnataka Weather) ಹಿನ್ನೆಲೆಯಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇ 10ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 11ರಂದು ಉತ್ತರ ಕನ್ನಡ, ದಕ್ಷಿಣ, ಉಡುಪಿ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.

ಮೇ 12ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೀದ‌ರ್, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 13ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಮಂಡ್ಯ, ಮೈಸೂರು, ಮಂಡ್ಯ, ಮೈಸೂರು ಸೇರಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ.

ಮೇ 14ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ನೀರು ಕುಡಿಯುವುದಕ್ಕೆ ಸೂಕ್ತ ಸಮಯ ಇದೆಯೇ?

ಮೇ 15ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »