Karunadu Studio

ಕರ್ನಾಟಕ

Hubli stabbing case: ಆಟದ ವಿಚಾರಕ್ಕೆ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆಗೈದ 13 ವರ್ಷದ ಬಾಲಕ! – Kannada News | A 13-year-old boy stabbed and killed his friend with a knife


ಹುಬ್ಬಳ್ಳಿ: ಆಟದ ವಿಚಾರಕ್ಕೆ13 ವರ್ಷದ ಬಾಲಕನೊಬ್ಬ ತನ್ನ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವುದು ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ. ಕಮರಿಪೇಟೆ ಪೋಲಿಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ (Hubli stabbing case) ನಡೆದಿದ್ದು, 15 ವರ್ಷದ ಚೇತನ್ ರಕ್ಕಸಗಿ ಕೊಲೆಯಾದ ಬಾಲಕ.​ ಸೋಮವಾರ ಸಂಜೆ ಚೇತನ್​ ಮತ್ತು ಕೊಲೆ ಮಾಡಿದ ಆರೋಪಿ ಬಾಲಕ ಇಬ್ಬರು ಜಗಳ ಮಾಡಿಕೊಂಡಿದ್ದರು. ಅಪ್ರಾಪ್ತ ವಯಸ್ಸಿನ ಬಾಲಕ ಮನೆಯಿಂದ ಚಾಕು ತಂದು ಚೇತನ್​ ಹೊಟ್ಟೆಯ ಎಡಬಾಗಕ್ಕೆ ಇರಿದಿದ್ದಾನೆ. ಇದರಿಂದ ಚೇತನ್​ ಸ್ಥಳದಲ್ಲೇ ಕುಸಿದು ಬಿದ್ದಿದ್ದು. ಅಲ್ಲಿದ್ದ ಮಕ್ಕಳು ಕಿರುಚುವುದನ್ನು ಕಂಡ ಆರೋಪಿ ತಾಯಿ ಸ್ಥಳಕ್ಕೆ ಬಂದು ಚೇತನ್​ನನ್ನು ಕಿಮ್ಸ್​​ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆಸ್ಪತ್ರೆಗೆ ಸೇರಿಸುವ ವೇಳೆಗೆ ಚೇತನ್​ ಮೃತಪಟ್ಟಿದ್ದಾನೆ.

ಇನ್ನು ಕೊಲೆಯಾದ ಚೇತನ್ ಈಗಷ್ಟೇ ಒಂಬತ್ತನೇ ತರಗತಿ ಪಾಸ್ ಆಗಿದ್ದನಂತೆ. ಕೊಲೆ ಮಾಡಿದ ಬಾಲಕ ಆರನೇ ತರಗತಿ ಪಾಸ್ ಆಗಿದ್ದನಂತೆ. ರಜೆ ಹಿನ್ನೆಲೆಯಲ್ಲಿ ಎದುರು ಬದುರು ಮನೆ ಆಗಿದ್ದರಿಂದ ಎಲ್ಲಾ ಬಾಲಕರು ಪ್ರತಿ ದಿನ ಆಟ ಆಡುತ್ತಿದ್ದರು. ನೆನ್ನೆ ಕೂಡ ಚೇತನ್ ಮತ್ತು ಕೊಲೆ ಮಾಡಿದ ಬಾಲಕ ಸೇರಿದಂತೆ ಐದಾರು ಸ್ನೇಹಿತರು ಸೇರಿಕೊಂಡು ಆಟವಾಡುತ್ತಿದ್ದರು. ಈ ವೇಳೆ ಚೇತನ್ ಮತ್ತು ಕೊಲೆ ಮಾಡಿರೋ ಬಾಲಕ ಆಟದ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಅಷ್ಟಕ್ಕೆ ಬಾಲಕ ಮನೆಗೆ ಹೋಗಿ ಚಾಕುತಂದು ಕೊಲೆ ಮಾಡಿ ಬಿಟ್ಟಿದ್ದಾನೆ.

ಘಟನೆ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಹುಬ್ಬಳ್ಳಿ ಪೊಲೀಸ್​ ಆಯುಕ್ತ ಎನ್​.ಶಶಿಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನನ್ನ ಸರ್ವೀಸ್​​ನಲ್ಲೇ ಇಂತಹ ಘಟನೆಯನ್ನು ಮೊದಲ ಬಾರಿಗೆ ನೋಡುತ್ತಿದ್ದೇನೆ. ಪೋಷಕರು ಮಕ್ಕಳ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದ್ದಾರೆ. ಚಾಕು ಇರಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ | Gims Hospital: ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್‌; ಗೋಡೆ ಒಡೆದು 9 ಮಂದಿ ರಕ್ಷಣೆ

ಬೀದರ್‌ನಲ್ಲಿ ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು

ಬೀದರ್: ಹೊಸ ಮನೆ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ 8ನೇ ತರಗತಿಯ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Electric Shock) ಹುಲಸೂರು ತಾಲೂಕಿನ ತೋಗಲೂರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪಲ್ಲವಿ ರಾಜೇಂದ್ರ ದೇವಗೊಂಡ (15) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಹೊಸ ಮನೆಗೆ ನೀರು ಹಾಕಲು ನೀರಿನ ಮೋಟರ್ ಆನ್ ಮಾಡಲು ಹೋದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಘಟನೆ ನಡೆದಿದೆ ತಿಳಿದು ಬಂದಿದೆ. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »