Karunadu Studio

ಕರ್ನಾಟಕ

Greater Bengaluru Authority: ಇನ್ಮುಂದೆ BBMP ಇರಲ್ಲ.. ಇನ್ನೇನಿದ್ದರೂ ಗ್ರೇಟರ್‌ ಬೆಂಗಳೂರು- ಆಡಳಿತದಲ್ಲೂ ಬದಲಾವಣೆ! – Kannada News | Greater Bengaluru Authority replaces BBMP as city’s governing body


ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮಹಾನಗರ ಪಾಲಿಕೆ BBMP ಯುಗಾಂತ್ಯಗೊಂಡಿದ್ದು, ಇಂದಿನಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆಡಳಿತ ಶುರು ಮಾಡಲಿದೆ. ಅಷ್ಟೇ ಅಲ್ಲದೇ ಆಡಳಿತದಲ್ಲೂ ಹತ್ತು ಹಲವು ಬದಲಾವಣೆಗಳೂ ಆಗಲಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯಾಚರಣೆ ನಿನ್ನೆದ ಮುಕ್ತಾಯಗೊಂಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ನಿನ್ನೆ GBAಗೆ ಅಧಿಕೃತ ಅಧಿಸೂಚನೆ ಹೊರಡಿಸಿತ್ತು. ಇಂದಿನಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಿಕೊಳ್ಳಲು ಅವಕಾಶ ಇದೆ. ಹಾಲಿ ಇರುವ 709 ಚದರ ಕಿಲೋ ಮೀಟರ್‌ನಿಂದ 1 ಸಾವಿರ ಚದರ ಕಿ.ಮೀ ವ್ಯಾಪ್ತಿಗೆ GBA ವಿಸ್ತರಣೆ ಮಾಡಲಾಗುತ್ತಿದೆ. GBAಗೆ ಬಿಬಿಎಂಪಿ ಅಧೀನದಲ್ಲಿದ್ದ ಪ್ರದೇಶಗಳ ಜತೆಗೆ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿರುವ ಸಾಕಷ್ಟು ಪ್ರದೇಶಗಳೂ ಸೇರ್ಪಡೆ ಆಗಿವೆ.

ಮೂರು ಪಾಲಿಕೆಗಳ ರಚನೆ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆ ರಚನೆ ಮಾಡಲು ನಿರ್ಧರಿಸಲಾಗಿದೆ. ಮೂರು ಪಾಲಿಕೆಗಳನ್ನಾಗಿ ವಿಂಗಡನೆ ಮಾಡಲು ಮುಂದಾಗಿದ್ದು, ಪ್ರತಿ ಪಾಲಿಕೆಯಲ್ಲಿಮ125 ವಾರ್ಡ್‌ಗಳಿರುತ್ತವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ ಮತ್ತು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಹೀಗೆ ಮೂರು ಪಾಲಿಕೆಗಳು ಕಾರ್ಯನಿರ್ವಹಿಸಲಿವೆ.

ಈ ಸುದ್ದಿಯನ್ನೂ ಓದಿ: Greater Bengaluru: ಮೇ 15ರಿಂದ ʼಗ್ರೇಟರ್‌ ಬೆಂಗಳೂರುʼ ಜಾರಿ; ಅಸ್ತಿತ್ವ ಕಳೆದುಕೊಳ್ಳಲಿದೆ ಬಿಬಿಎಂಪಿ!

ಆಡಳಿತದಲ್ಲಿ ಮತ್ತೆ ಬೇರೇನು ಬದಲಾಗಲಿವೆ?

  • ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಮುಖ್ಯಮಂತ್ರಿಗಳೇ ಅಧ್ಯಕ್ಷರು
  • ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಉಪಾಧ್ಯಕ್ಷರಾಗಿ ಬೆಂಗಳೂರು ಅಭಿವೃದ್ಧಿ ಸಚಿವರು ಕಾರ್ಯ ನಿರ್ವಹಣೆ
  • ತಲಾ 125 ವಾರ್ಡ್‌ಗಳನ್ನು ಒಳಗೊಂಡ ಮೂರು ನಗರ ಪಾಲಿಕೆ
  • ಪ್ರತಿ ಪಾಲಿಕೆಗೂ ಗ್ರೇಟರ್ ಬೆಂಗಳೂರು ಪ್ರದೇಶದ ಗಡಿ ನಿಗಧಿ
  • ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಜಿಗಣಿ ಕೈಗಾರಿಕೆ ಪ್ರದೇಶ ಬೊಮ್ಮಸಂದ್ರ, ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ ಸೇರ್ಪಡೆ ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯೂ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ
  • ಗ್ರೇಟರ್ ಬೆಂಗಳೂರು ಕಟ್ಟಡಗಳ ಗಾತ್ರ, ಎತ್ತರ ನಿಯಮಗಳು ಬದಲು ಸಾಧ್ಯತೆ
  • ವಸತಿ ಕಟ್ಟಡಗಳಿಗೆ ಶೇ. 50ರಷ್ಟು & ವಾಣಿಜ್ಯ ಕಟ್ಟಡಗಳಿಗೆ ಶೇ. 25ರಷ್ಟು ಕಡಿತ ತರುವ ಸಾಧ್ಯತೆ



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »