Karunadu Studio

ಕರ್ನಾಟಕ

Karnataka Rains: ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ – Kannada News | Heavy rain is likely in the Karnataka for the next 3 days


ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಮೂರು ದಿನ ಗುಡಗು ಸಹಿತ ಭಾರಿ ಮಳೆಯಾಗುವ (Karnataka Rains) ಸಾಧ್ಯತೆ ಹಿನ್ನೆಲೆಯಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿಗೆ ಮೇ 19ರವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಮೇ 17ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಮುಂದಿನ 3 ದಿನಗಳ ಕಾಲ ರಾಜ್ಯದಾದ್ಯಂತ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ನಿರೀಕ್ಷಿಸಲಾಗಿಲ್ಲ. ಮುಂದಿನ 5 ದಿನಗಳವರೆಗೆ ರಾಜ್ಯದಲ್ಲಿ ಗರಿಷ್ಠ ತಾಪಮಾನದಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಗಳಿಲ್ಲ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31°C ಮತ್ತು 19°C ಇರುವ ಸಾಧ್ಯತೆ ಇದೆ.

ಮೇ 18ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಕೋಲಾರ, ರಾಮನಗರ, ವಿಜಯನಗರ, ತುಮಕೂರು, ಚಾಮರಾಜನಗರ, ದಾವಣಗೆರೆ, ಮೈಸೂರು, ಮಂಡ್ಯ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಮೇ 19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮೈಸೂರು, ಹಾಸನ, ಕೊಡಗು, ಚಿತ್ರದುರ್ಗ, ಕೋಲಾರ, ರಾಮನಗರ, ವಿಜಯನಗರ, ಚಾಮರಾಜ, ಚಾಮರಾಜನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನೂ ಓದಿ | Health Tips: ತೂಕ ಇಳಿಸುವ ಸರಳ ವ್ಯಾಯಾಮಗಳು ಗೊತ್ತೇ?

ಮೇ 21 ಮತ್ತು 22ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »