Karunadu Studio

ಕರ್ನಾಟಕ

Murder Case:ಸಿಗರೇಟ್‌ ತಂದುಕೊಡಲಿಲ್ಲ ಎಂದು ಟೆಕ್ಕಿಯ ಕೊಲೆ – Kannada News | techie killed for cigarette issue murder case bengaluru crime news


ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ (Bengaluru Crime News) ಆಗಿದೆ. ಕ್ಷುಲ್ಲಕ ಕಾರಣಕ್ಕೆ ಕಾರು ಗುದ್ದಿಸಿ ಟೆಕ್ಕಿಯೊಬ್ಬರನ್ನು ಬರ್ಬರವಾಗಿ ಹತ್ಯೆ (Murder Case) ಮಾಡಿರುವ ಘಟನೆ ನಡೆದಿದೆ. ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಸಿಗರೇಟ್ ವಿಚಾರವಾಗಿ ಇಬ್ಬರ ನಡುವೆ ಕಿರಿಕ್ ಆರಂಭವಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಸಂಜಯ್ ಕೊಲೆಯಾಗಿರುವ ಟೆಕ್ಕಿ. ಪ್ರತೀಕ್ ಎಂಬಾತ ಕೊಲೆ ಮಾಡಿದ್ದಾನೆ. ಅಪಘಾತದಿಂದ ಸಾವು ಎಂದು ತಿಳಿದಿದ್ದ ಪೊಲೀಸರಿಗೆ ತನಿಖೆ ಬಳಿಕ ಇದು ಕೊಲೆ ಎಂಬುದು ಗೊತ್ತಾಗಿದೆ.

ಸಿಗರೇಟ್ ಸೇದಲು ಸಂಜಯ್ ಹಾಗೂ ಕಾರ್ತಿಕ್ ಕಚೇರಿಯಿಂದ ಹೊರ ಬಂದಿದ್ದರು. ರಸ್ತೆ ಬದಿ ಅಂಗಡಿಯಲ್ಲಿ ಸಿಗರೇಟ್ ಖರೀದಿಸಿ ಅಲ್ಲಿಯೇ ಸೇದುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಎಂಬಾತ ಕಾರಿನಿಂದ ಇಳಿಯದೇ ಸಿಗರೇಟ್ ತಂದು ಕೊಡುವಂತೆ ಸಂಜಯ್‌ಗೆ ಹೇಳಿದ್ದ ಎನ್ನಲಾಗಿದ್ದು, ಇದರಿಂದ ಕೋಪಗೊಂಡ ಸಂಜಯ್ ಹಾಗೂ ಕಾರ್ತಿಕ್, ಪ್ರತೀಕ್ ಜೊತೆ ಜಗಳವಾಡಿದ್ದಾರೆ. ಗಲಾಟೆ ತಾರಕಕ್ಕೇರಿದೆ. ಬಳಿಕ ಸಂಜಯ್ ಹಾಗೂ ಕಾರ್ತಿಕ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರನ್ನು ಬೈಕ್‌ಗೆ ಡಿಕ್ಕಿ ಹೊಡೆಸಿದ್ದಾನೆ. ಕೆಳಗೆ ಬಿದ್ದ ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರ್ತಿಕ್‌ಗೆ ಗಾಯಗಳಾಗಿವೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬಂಟ್ವಾಳದಲ್ಲಿ ಯುವಕನಿಗೆ ಇರಿತ

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ (Mangaluru news) ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ (Suhas Shetty murder) ಹತ್ಯೆಯಿಂದಾಗಿ ದಕ್ಷಿಣ ಕನ್ನಡದಲ್ಲಿ (Dakshina kannada) ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಇಂದು ಬಂಟ್ವಾಳದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಓರ್ವ ಯುವಕನಿಗೆ ಚೂರಿ‌ ಇರಿದು (Stabbing) ಪರಾರಿಯಾಗಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೇ ಸೇತುವೆ ಬಳಿ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಗಾಯಗೊಂಡ ಹಮೀದ್ ಎಂಬವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದು, ಒಂದೇ ಕೋಮಿನ ತಂಡದ ನಡುವೆ ಘರ್ಷಣೆಯಿಂದಾಗಿ ಈ ಕೃತ್ಯ ನಡೆದಿರುವ ಶಂಕೆ ಉಂಟಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೈಂಟರ್ ಕೆಲಸ ಮಾಡುವ ಹಮೀದ್ ಯಾನೆ ಅಮ್ಮಿಗೆ ಎಂಬಾತ ಗಾಯಗೊಂಡಿದ್ದಾರೆ. ಇರಿತದಿಂದ ಹಮೀದ್ ಕೈ ಭಾಗಕ್ಕೆ ಏಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೆ ವೈಯಕ್ತಿಕ ದ್ವೇಷ ಕಾರಣವೇ, ತಂಡಗಳ ನಡುವಿನ ಘರ್ಷಣೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case: ಮೂರು ಮಕ್ಕಳ ತಾಯಿಯ ಲವಿ ಡವಿ, ಪ್ರೇಮಿಯಿಂದಲೇ ಕೊಲೆ



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »