Karunadu Studio

ಕರ್ನಾಟಕ

ISI Agent: ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ ; ಯೂಟ್ಯೂಬರ್‌ ಜ್ಯೋತಿ ಬಳಿಕ ಯುಪಿ ಉದ್ಯಮಿ ಬಂಧನ – Kannada News | After Haryana YouTuber, UP Businessman Arrested For Spying For Pakistan


ಲಖನೌ: ಪಾಕಿಸ್ತಾನದ ಪರ ಬೇಹುಗಾರಿಕೆ (ISI Agent) ನಡೆಸುತ್ತಿದ್ದ ಯೂಟ್ಯೂಬರ್‌ ಜ್ಯೋತಿ ಬಂಧನ ಬಳಿಕ ದೇಶಾದ್ಯಂತ ಬೇಹಾಗಾರಿಕೆ ನಡೆಸುತ್ತಿರುವವರ ಹುಡುಕಾಟ ಜೋರಾಗಿದೆ. ಇದೀಗ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ರಾಂಪುರದಲ್ಲಿ ಉದ್ಯಮಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಗಾಗಿ ಗಡಿಯಾಚೆಗಿನ ಕಳ್ಳಸಾಗಣೆ ಮತ್ತು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಮಾಹಿತಿಯ ನಂತರ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮೊರಾದಾಬಾದ್‌ನಲ್ಲಿ ಆರೋಪಿ ಶಹಜಾದ್‌ನನ್ನು ಬಂಧಿಸಿದೆ.

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಅವನು ತನ್ನ ನಿರ್ವಾಹಕರಿಗೆ ರವಾನಿಸುತ್ತಿದ್ದನು ಎಂದು ಎಸ್‌ಟಿಎಫ್ ಹೇಳಿಕೆಯಲ್ಲಿ ತಿಳಿಸಿದೆ. ಶಹಜಾದ್ ಹಲವು ವರ್ಷಗಳಿಂದ ಪಾಕಿಸ್ತಾನಕ್ಕೆ ಹಲವು ಬಾರಿ ಪ್ರಯಾಣಿಸಿದ್ದು , ಗಡಿಯುದ್ದಕ್ಕೂ ಸೌಂದರ್ಯವರ್ಧಕಗಳು, ಬಟ್ಟೆಗಳು, ಮಸಾಲೆಗಳು ಮತ್ತು ಇತರ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿರುವ ಐಎಸ್‌ಐ ಏಜೆಂಟ್‌ಗಳಿಗೆ ಶಹಜಾದ್ ಹಣ ಮತ್ತು ಭಾರತೀಯ ಸಿಮ್ ಕಾರ್ಡ್‌ಗಳನ್ನು ಒದಗಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಆತ ರಾಂಪುರ ಜಿಲ್ಲೆ ಮತ್ತು ಉತ್ತರ ಪ್ರದೇಶದ ಇತರ ಭಾಗಗಳಿಂದ ಜನರನ್ನು ಐಎಸ್‌ಐಗಾಗಿ ಕೆಲಸ ಮಾಡಲು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ ಎಂದು ಎಸ್‌ಟಿಎಫ್ ಹೇಳಿಕೊಂಡಿದೆ. ಈತ ಐಎಸ್‌ಐಗಾಗಿ ರಹಸ್ಯ ಕಾರ್ಯಾಚರಣೆಗಳನ್ನು ನಡೆಸಲು ಸಹಾಯ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ: Arvind Bellad: ಮಸೀದಿಗಳಲ್ಲಿ ಅಪರಿಚಿತರ ಓಡಾಟ; ಪಾಕಿಸ್ತಾನಿಗಳಿರಬಹುದು ಎಂದು ಸಂಸದರ ದೂರು

ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಹರಿಯಾಣ ಮೂಲದ ಯೂಟ್ಯೂಬರ್ ಒಬ್ಬರನ್ನು ಬಂಧಿಸಿದ ಕೆಲವು ದಿನಗಳ ನಂತರ ಶಹಜಾದ್ ಬಂಧನವಾಗಿದೆ. ಟ್ರಾವೆಲ್ ವಿತ್ ಜೆಒ’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಮತ್ತು ಮೂರು ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿರುವ ಜ್ಯೋತಿ ಮಲ್ಹೋತ್ರಾ , ದೆಹಲಿಯ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಸಿಬ್ಬಂದಿಯೊಂದಿಗೆ ಸಂಪರ್ಕದಲ್ಲಿಳು ಎಂಬ ಆರೋಪದಡಿ ಆಕೆಯನ್ನು ಬಂಧಿಸಲಾಗಿದೆ. ಆಕೆ ತನ್ನ ವಿಡಿಯೋದಲ್ಲಿ ಪಾಕಿಸ್ತಾನ ಭೇಟಿಯ ಕೆಲವು ವೀಡಿಯೊಗಳನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾಳೆ. ಸದ್ಯ ಆಕೆಯ ವಿಚಾರಣೆ ನಡೆಸಲಾಗುತ್ತಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »