Karunadu Studio

ಕರ್ನಾಟಕ

Karnataka Rains: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ; ಸಿಡಿಲು ಬಡಿದು ರೈತ ಸಾವು – Kannada News | Farmer death due to lightning strike in Ankola


ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಉಳುವರೆ ಗ್ರಾಮದಲ್ಲಿ ಸಿಡಿಲು ಬಡಿದು ರೈತನೊಬ್ಬರು ಮೃತಪಟ್ಟಿದ್ದಾರೆ. ಉಳುವರೆ ಗ್ರಾಮದ ರೈತ ತಮ್ಮಣ್ಣಿ ಅನಂತ ಗೌಡ (65) ಮೃತರು. ಸೋಮವಾರ ಸಂಜೆ ಮನೆ ಬಳಿ ಸಿಡಿಲುಬಡಿದು ರೈತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್

ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಆಗಾಗ ಬಿರುಸಿನ ಮಳೆ ಬೀಳುತ್ತಿದೆ. ಕರಾವಳಿ ಭಾಗದ ತಾಲೂಕುಗಳಲ್ಲಿ ಮಳೆ ಪ್ರಮಾಣ ಹೆಚ್ಚಿದ್ದು, ಜಿಲ್ಲೆಯಾದ್ಯಂತ ದಟ್ಟ ಮೋಡ ಕವಿದ ವಾತಾವರಣವಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ‌ ಪೂರ್ವ ಮುಂಗಾರು ಮಳೆ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಮಂಗಳವಾರ ಆರೆಂಜ್ ಮತ್ತು ಬುಧವಾರ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಮೇ 25ರವರೆಗೆ ಬಿರುಗಾಳಿ ಸಹಿತ ಮಳೆ ಬೀಳಲಿದೆ. ಮೇ 23ರವರೆಗೆ ಪ್ರತಿ ಗಂಟೆಗೆ ಸರಾಸರಿ 35 ರಿಂದ 45 ಕಿ.ಮೀ ವೇಗದ ಗಾಳಿ ಬೀಸಲಿದ್ದು, ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು’ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

‘ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿರುವ ಕಾರಣ ಅವಘಡ ಘಟಿಸಿದರೆ ಸ್ಪಂದಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru Rains: ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ; ಸಮರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಲು ಸೂಚನೆ

“ಅಪಾಯಕಾರಿ ಮರಗಳು, ವಿದ್ಯುತ್ ಕಂಬದ ಹತ್ತಿರ ಜನರು ನಿಲ್ಲಬಾರದು. ತುಂಡಾದ ವಿದ್ಯುತ್ ತಂತಿಗಳಿಂದ ದೂರ ನಿಲ್ಲಬೇಕು. ದುರ್ಬಲವಾದ, ಹಳೆಯ ಕಟ್ಟಡಗಳ ಕೆಳಗೆ ನಿಲ್ಲಬಾರದು. ಸಮಸ್ಯೆಗಳಿಗೆ ತುತ್ತಾದರೆ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿ (08382 229857, 9483511015) ಅಥವಾ ಆಯಾ ತಾಲೂಕಿನ ತಹಶೀಲ್ದಾ‌ರ್ ಕಚೇರಿಗೆ ಕರೆ ಮಾಡಬಹುದು’ ಎಂದು ಸೂಚಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »