Karunadu Studio

ಕರ್ನಾಟಕ

Pakistan High Commission: ಭಾರತದಿಂದ ಪಾಕಿಸ್ತಾನದ ಹೈಕಮಿಷನ್ ಅಧಿಕಾರಿಯ ಉಚ್ಛಾಟನೆ; 8 ದಿನಗಳ ಅಂತರದಲ್ಲಿ ಇಬ್ಬರು ಅಧಿಕಾರಿಗಳ ವಜಾ – Kannada News | India Expels Another Pak High Commission Official


ಹೊಸದಿಲ್ಲಿ: ದಿಲ್ಲಿಯ ಪಾಕಿಸ್ತಾನ ಹೈಕಮಿಷನ್‌ನಲ್ಲಿ (Pakistan High Commission) ಕೆಲಸ ಮಾಡುತ್ತಿರುವ ಪಾಕ್‌ ಅಧಿಕಾರಿಯೊಬ್ಬರನ್ನು ಬುಧವಾರ (ಮೇ 21) ದೇಶದಿಂದ ಹೊರ ಹಾಕಲಾಗಿದೆ. ಆ ಅಧಿಕಾರಿಗೆ 24 ಗಂಟೆಯ ಒಳಗೆ ಭಾರತವನ್ನು ತೊರೆಯುವಂತೆ ಸೂಚಿಸಲಾಗಿದೆ. ಭಾರತದಲ್ಲಿ ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಸರ್ಕಾರ ಅವರನ್ನು ದೇಶದಿಂದ ಹೊರ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ 13ರಂದು ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ನೊಬ್ಬ ಅಧಿಕಾರಿಯನ್ನು ಹೊರ ಕಳುಹಿಸಲಾಗಿತ್ತು. ಈ ಮೂಲಕ 8 ದಿನಗಳ ಅಂತರದಲ್ಲಿ ಇಬ್ಬರು ಅಧಿಕಾರಿಗಳನ್ನು ಹೊರ ಹಾಕಿದಂತಾಗಿದೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿ ಮತ್ತು ನಂತರ ಉಂಟಾದ 2 ದೇಶಗಳ ನಡುವಿನ ಮಿಲಿಟರಿ ಘರ್ಷಣೆಯ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ. ʼʼದಿಲ್ಲಿಯ ಪಾಕ್ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಪಾಕ್ ಅಧಿಕಾರಿಯೊಬ್ಬರು, ಭಾರತದಲ್ಲಿ ಅವರ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಅವರನ್ನು ಅನುಚಿತ ವ್ಯಕ್ತಿ” ಎಂದು ಭಾರತ ಸರ್ಕಾರ ಘೋಷಿಸಿದೆ ಎಂಬುದಾಗಿ ವಿದೇಶಾಂಗ ಸಚಿವಾಲಯ (Ministry of External Affairs) ತಿಳಿಸಿದೆ. ಅದಕ್ಕಾಗಿ 24 ಗಂಟೆಗಳ ಒಳಗೆ ಭಾರತ ಬಿಟ್ಟು ಹೋಗುವಂತೆ ಸೂಚಿಸಲಾಗಿದೆ ಎಂದು ಹೇಳಿದೆ.



ಈ ಸುದ್ದಿಯನ್ನೂ ಓದಿ: Operation Sindoor: ಆಪರೇಷನ್‌ ಸಿಂದೂರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಾಧ್ಯಾಪಕನಿಗೆ ಮಧ್ಯಂತರ ಜಾಮೀನು

ಆದಾಗ್ಯೂ, ಪಾಕ್ ಅಧಿಕಾರಿಯ ವಿರುದ್ಧ ಯಾವುದೇ ನಿರ್ದಿಷ್ಟ ಆರೋಪವನ್ನು ವಿದೇಶಾಂಗ ಸಚಿವಾಲಯ ಬಹಿರಂಗಪಡಿಸಿಲ್ಲ.

ಈ ಹಿಂದೆ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನಿ ಅಧಿಕಾರಿಯೊಬ್ಬರು ಬೇಹುಗಾರಿಕೆಯಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ದೇಶದಿಂದ ಹೊರ ಹಾಕಲಾಗಿತ್ತು. ಇದೇ ವೇಳೆ ವಿದೇಶಾಂಗ ಸಚಿವಾಲಯವು ನಿರ್ದಿಷ್ಟ ಆರೋಪಗಳನ್ನು ಬಹಿರಂಗಪಡಿಸದಿದ್ದರೂ, ಅವರು ಪಂಜಾಬ್ ಪೊಲೀಸರು ತನಿಖೆ ನಡೆಸುತ್ತಿರುವ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮೇ 11ರಂದು ದಿಲ್ಲಿಯ ಪಾಕಿಸ್ತಾನ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಅಧಿಕಾರಿಯೊಂದಿಗೆ ಸಂಬಂಧ ಹೊಂದಿರುವ ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿರುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದರು.

ಪಾಕಿಸ್ತಾನದಿಂದ ಪ್ರತೀಕಾರದ ಕ್ರಮ

ಪ್ರತೀಕಾರದ ಕ್ರಮವಾಗಿ ಬಳಿಕ ಪಾಕಿಸ್ತಾನವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಸಿಬ್ಬಂದಿಯೊಬ್ಬರನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಿ ದೇಶಕ್ಕೆ ವಾಪಸ್‌ ಕಳುಹಿಸಿತ್ತು.

ಏ. 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಉಗ್ರರ ವಿರುದ್ಧ ಸೇಡು ತೀರಿಸಿಕೊಂಡ ಭಾರತ ಮೇ 7ರಂದು ಆಪರೇಷನ್ ಸಿಂದೂರ್‌ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ 9 ಭಯೋತ್ಪಾದಕ ನೆಲೆಗಳಲ್ಲಿನ ಮೂಲ ಸೌಕರ್ಯಗಳನ್ನು ನಾಶಪಡಿಸಿತ್ತು. ಪಾಕಿಸ್ತಾನ ಮೂಲದ ನಿಷೇಧಿತ ಎಲ್‌ಇಟಿ ಭಯೋತ್ಪಾದಕ ಗುಂಪಿನ ರೆಸಿಸ್ಟೆನ್ಸ್ ಫ್ರಂಟ್ ಈ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಬಳಿಕ ಉಂಟಾದ ಸಂಘರ್ಷದ ವಾತಾವರಣ 2 ದೇಶಗಳ ನಡುವೆ ಯುದ್ಧದ ವಾತಾವರಣ ಮೂಡಿತ್ತು. ಕೊನೆಗೆ ಮೇ 10ರಂದು ಕದನ ವಿರಾಮ ಜಾರಿಗೆ ಬಂದಿತ್ತು.





Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »