Karunadu Studio

ಕರ್ನಾಟಕ

Gold Rate Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ – Kannada News | Gold Price Today on 24th May 2025; Check Gold silver Price in Bengaluru, Chennai, Kolkata, Mumbai and Delhi in Kannada


ಬೆಂಗಳೂರು: ಚಿನ್ನದ ದರದಲ್ಲಿ ಶನಿವಾರ (ಮೇ 24) ಮತ್ತೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿದೆ (Gold Rate Today). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 50 ರೂ. ಏರಿಕೆ ಕಂಡಿದ್ದು, 8,990 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 55 ರೂ. ಏರಿಕೆಯಾಗಿ 9,808 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,900 ರೂ. ಮತ್ತು 100 ಗ್ರಾಂಗೆ 9,99,000 ರೂ. ನೀಡಬೇಕಾಗುತ್ತದೆ. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ 78,464 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 98,080 ರೂ. ಮತ್ತು 100 ಗ್ರಾಂಗೆ 9,80,800ರೂ. ಪಾವತಿಸಬೇಕಾಗುತ್ತದೆ.

ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ?

ಬೆಳ್ಳಿ ದರ

ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡು ಬಂದಿದೆ. ಬೆಳ್ಳಿ 1 ಗ್ರಾಂನ ಬೆಲೆ 99.90 ರೂ., 8 ಗ್ರಾಂಗೆ 799 ರೂ., 10 ಗ್ರಾಂ.ಗೆ 999 ರೂ. ಮತ್ತು 1 ಕೆಜಿಗೆ 99,900 ರೂ. ಇದೆ.

ಈ ಸುದ್ದಿಯನ್ನೂ ಓದಿ: Gold Discovery: ಅಬ್ಬಬ್ಬಾ ಲಾಟ್ರಿ! ರೈತನ ಗದ್ದೆಯಲ್ಲಿ ಪತ್ತೆಯಾಯಿತು ಭಾರಿ ಚಿನ್ನದ ನಿಕ್ಷೇಪ

ಚಿನ್ನಾಭರಣ ಖರೀದಿಸುವ ಮುನ್ನ ಗಮನಿಸಬೇಕಾದ ಅಂಶ

ಶುದ್ಧತೆ: ಚಿನ್ನಾಭರಣ ಖರೀದಿಸುವ ಮುನ್ನ ಅದರ ಶುದ್ಧತೆಯನ್ನು ಪರಿಶೀಲಿಸುವುದು ಅಗತ್ಯ. ಚಿನ್ನದ ಮೇಲೆ ಶುದ್ಧತೆಯನ್ನು ಸೂಚಿಸುವ ಬಿಐಎಸ್‌ (BIS) ಹಾಲ್‌ಮಾರ್ಕ್‌ ಇದೆ ಎನ್ನುವುದನ್ನು ಖಚಿತಪಡಿಸಿ. ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂಬುದನ್ನು ಆ ಮೂಲಕ ಪ್ರಮಾಣೀಕರಿಸಬಹುದು.

ಬೆಲೆ: ಚಿನ್ನದ ಬೆಲೆ ಪ್ರತಿ ದಿನ ಬದಲಾಗುತ್ತಿರುತ್ತದೆ. ಖರೀದಿಸುವ ಮುನ್ನ ಬೆಲೆ ಎಷ್ಟಿದೆ ಎನ್ನುವುದನ್ನು ಗಮನಿಸಿ. ಇದಕ್ಕಾಗಿ ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಪರಿಶೀಲಿಸುವುದನ್ನು ಮರೆಯಬೇಡಿ.

ಹೋಲಿಕೆ ಮಾಡಿ: ಮತ್ತೊಂದು ಮುಖ್ಯ ವಿಚಾರ ಎಂದರೆ ಬೆಲೆಗಳ ಹೋಲಿಕೆ. ಬೇರೆ ಬೇರೆ ಜ್ಯುವೆಲ್ಲರಿಗಳಲ್ಲಿ ವ್ಯತ್ಯಸ್ತ ಬೆಲೆಗಳಿರುತ್ತವೆ. ನೀವು ಚಿನ್ನ ಖರೀದಿಸುವ ಮುನ್ನ ಬೆಲೆಗಳನ್ನು ಹೋಲಿಸಿ ನೋಡಿ. ಇದರಿಂದ ನಿಮಗೆ ಸಾಕಷ್ಟು ಹಣ ಉಳಿತಾಯು ಮಾಡಬಹುದಾಗಿದೆ.

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ (Making Charges) ಮತ್ತು ವೇಸ್ಟೇಜ್ ಚಾರ್ಜ್ (Wastage Charges) ಎಂದಿರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲ ಆಭರಣಗಳಿಗೆ ಮೇಕಿಂಗ್, ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ.

ವಿನ್ಯಾಸ: ಮೊದಲೇ ಹೇಳಿದಂತೆ ಆಭರಣಗಳ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುತ್ತದೆ. ಸೂಕ್ಷ್ಮ ಕೆತ್ತನೆಯ, ಕೈಯಿಂದ ತಯಾರಿಸುವ ಆಭರಣ ಸ್ವಲ್ಪ ದುಬಾರಿಯಾಗಿತ್ತವೆ. ಆದ್ದರಿಂದ ಈ ಬಗ್ಗೆಯೂ ಗಮನ ಹರಿಸಿ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »