Karunadu Studio

ಕರ್ನಾಟಕ

Kodishri Bhavishya: ಜಲ, ವಾಯು ಗಂಡಾಂತರ; ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯದಲ್ಲಿ ಏನೇನಿದೆ? – Kannada News | Kodi Mutt Swamiji’s Explosive Predictions


ಬೆಳಗಾವಿ: ದೇಶಾದ್ಯಂತ ಮತ್ತೆ ಕೋವಿಡ್‌ (Covid-19) ಪ್ರಕರಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ಬೆಳಗಾವಿಯಲ್ಲಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದ್ದಾರೆ (Kodishri Bhavishya). ಮತ್ತೆ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಹೇಳಿದ್ದಾರೆ. 5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ. ʼʼಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ 5 ವರ್ಷ ಗಂಡಾಂತರವಿದೆʼʼ ಎಂದು ಅವರು ಹೇಳಿದ್ದಾರೆ.

ʼʼ5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಎದುರಾಗಲಿದ್ದು, ಜನರು ಹುಷಾರಾಗಿರೋದು ಒಳ್ಳೇಯದು. ಹಿಮಾಲಯ ಕರಗಿ ದಿಲ್ಲಿಯವರೆಗೆ ತಲುಪಲಿದೆ. ಅಲ್ಲದೆ ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆʼʼ ಎಂದು ಕೋಡಿಶ್ರೀ ವಿವರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Dengue Case: ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ- ಪೋಷಕರೇ ಎಚ್ಚರ !

ಯುದ್ಧ ಭೀತಿ

ರಾಜಕೀಯವಾಗಿ ಅರಸನರಮನೆಗೆ ಕಾರ್ಮೋಡ ಕವಿದಿತ್ತು ಎಂದು ಸ್ವಾಮೀಜಿ ಮಾರ್ಮಿಕವಾಗಿ ನುಡಿದಿದ್ದಾರೆ. ʼʼಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದ್ದು, ಜನರಲ್ಲಿ ಅಶಾಂತಿ ಹೆಚ್ಚಾಗಲಿದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ರಚನೆಯಾಗುತ್ತವೆʼʼ ಎಂದು ಹೇಳಿದ್ದಾರೆ.

ರಾಜ್ಯ ರಾಜಕೀಯ ಹೇಗಿರಲಿದೆ?

ʼʼಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯ ಕಾಡಲಿದೆ. ಅದಾಗ್ಯೂ ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕುʼʼ ಎಂದು ಸ್ವಾಮೀಜಿ ತಿಳಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »