Karunadu Studio

ಕರ್ನಾಟಕ

IND vs ENG: ಟೆಸ್ಟ್ ತಂಡದಿಂದ ಸರ್ಫರಾಝ್‌ ಖಾನ್‌ರನ್ನು ಕೈ ಬಿಡಲು ಕಾರಣ ತಿಳಿಸಿದ ಅಜಿತ್‌ ಅಗರ್ಕರ್‌! – Kannada News | IND vs ENG: Why Karun Nair, why not Sarfaraz Khan? Chief selector explains big England tour call


ನವದೆಹಲಿ: ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಜೂನ್‌ 20 ರಂದು ಆರಂಭವಾಗುವ ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟೆಸ್ಟ್‌ ಸರಣಿಗೆ (IND vs ENG) 18 ಸದಸ್ಯರ ಭಾರತ ತಂಡವನ್ನು (India’s Test Squad) ಪ್ರಕಟಿಸಿದೆ. ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ಹೊಸ ಪ್ರತಿಭೆಗಳಿಗೆ ಅವಕಾಶವನ್ನು ನೀಡಲಾಗಿದೆ. ಯುವ ಬ್ಯಾಟ್ಸ್‌ಮನ್‌ ಶುಭಮನ್‌ ಗಿಲ್‌ ನಾಯಕತ್ವ ನೀಡಲಾಗಿದ್ದು, ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ಗೆ ಉಪ ನಾಯಕತ್ವವನ್ನು ನೀಡಲಾಗಿದೆ. ಆದರೆ, ಕಳೆದ ವರ್ಷ ಇಂಗ್ಲೆಂಡ್‌ ವಿರುದ್ಧದ ತವರು ಟೆಸ್ಟ್‌ ಸರಣಿಯಲ್ಲಿ ಅಂತಾರಾಷ್ಟ್ರೀಯ ರೆಡ್‌ ಬಾಲ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಬ್ಯಾಟಿಂಗ್‌ನಲ್ಲಿ ಗಮನ ಸೆಳೆದಿದ್ದ ಸರ್ಫರಾಝ್‌ ಖಾನ್‌ (Sarfaraz Khan) ಅವರನ್ನು ಇಂಗ್ಲೆಂಡ್‌ ಪ್ರವಾಸದ ತಂಡದಿಂದ ಕೈ ಬಿಡಲಾಗಿದೆ.

ಸರ್ಫರಾಝ್‌ ಖಾನ್‌ ಅವರು 2024ರ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದರು. ಈ ಸರಣಿಯಲ್ಲಿ ಅವರು ಬ್ಯಾಟಿಂಗ್‌ನಲ್ಲಿ ಗಮನ ಸೆಳೆದಿದ್ದರು. ನಂತರ ನ್ಯೂಜಿಲೆಂಡ್‌ ವಿರುದ್ಧದ ತವರು ಟೆಸ್ಟ್‌ ಸರಣಿಯ ಆರಂಭಿಕ ಪಂದ್ಯದಲ್ಲಿ ಅವರು ಚೊಚ್ಚಲ ಟೆಸ್ಟ್‌ ಶತಕವನ್ನು ಬಾರಿಸಿದ್ದರು. ನಂತರ ಅವರು ಇನ್ನುಳಿದ ಎರಡು ಪಂದ್ಯಗಳಲ್ಲಿ ವಿಫಲರಾಗಿದ್ದರು. ನಂತರ ಆಸ್ಟ್ರೇಲಿಯಾ ಪ್ರವಾಸದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಒಂದೇ ಒಂದು ಪಂದ್ಯದಲ್ಲಿಯೂ ಆಡಲು ಅವಕಾಶ ಸಿಕ್ಕಿರಲಿಲ್ಲ. ಅಂದ ಹಾಗೆ ಸಿಕ್ಕಿದ್ದ ಸೀಮಿತ ಅವಕಾಶಗಳಲ್ಲಿ ಮುಂಬೈ ಬ್ಯಾಟ್ಸ್‌ಮನ್‌ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ಅವರು ಆಡಿದ 6 ಟೆಸ್ಟ್‌ ಪಂದ್ಯಗಳಿಂದ 371 ರನ್‌ಗಳನ್ನು ಕಲೆ ಹಾಕಿದ್ದಾರೆ. ಆದರೆ, ಇಂಗ್ಲೆಂಡ್‌ ವಿರುದ್ದದ ಟೆಸ್ಟ್‌ ಸರಣಿಯ ಭಾರತ ತಂಡದಲ್ಲಿ ಸ್ಥಾನ ಸಿಗದೆ ಇರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ.

India’s Test Squad: ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ, ಶುಭಮನ್‌ ಗಿಲ್‌ ನೂತನ ನಾಯಕ!

ಆದರೆ, ಸರ್ಫರಾಝ್‌ ಖಾನ್‌ ಅವರ ಜಾಗದಲ್ಲಿ ಕರ್ನಾಟಕದ ಕರುಣ್‌ ನಾಯರ್‌ಗೆ ಅವಕಾಶವನ್ನು ನೀಡಲಾಗಿದೆ. ಅವರು ವಿದರ್ಭ ತಂಡದ ಪರ 800ಕ್ಕೂ ಅಧಿಕ ರನ್‌ಗಳನ್ನು ಕಲೆ ಹಾಕಿದ್ದಾರೆ. ಆ ಮೂಲಕ ವಿದರ್ಭ ತಂಡ ಮೂರನೇ ಬಾರಿ ರಣಜಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲು ನೆರವು ನೀಡಿದ್ದರು. ಅಲ್ಲದೆ ವೈಟ್‌ ಬಾಲ್‌ ಸರಣಿಗಳಲ್ಲಿಯೂ ಕರುಣ್‌ ನಾಯರ್‌ ಅವರು ಮಿಂಚಿದ್ದರು. ಈ ಹಿನ್ನೆಲೆಯಲ್ಲಿ ಕರುಣ್‌ ನಾಯರ್‌ಗೆ ಎಂಟು ವರ್ಷಗಳ ಬಳಿಕ ಭಾರತ ಟೆಸ್ಟ್‌ ತಂಡದಲ್ಲಿ ಸ್ಥಾನ ಸಿಕ್ಕಿದೆ.

ಭಾರತ ಟೆಸ್ಟ್‌ ತಂಡವನ್ನು ಪ್ರಕಟಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಸಿಸಿಐ ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್‌, ಹಲವು ಸಂಗತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ಟೆಸ್ಟ್‌ ತಂಡದಲ್ಲಿ ಸರ್ಫರಾಝ್‌ ಖಾನ್‌ಗೆ ಸ್ಥಾನ ನೀಡದೆ ಇರಲು ಕಾರಣವೇನೆಂದು ಬಹಿರಂಗಪಡಿಸಿದ್ದಾರೆ. ಸ್ಪರ್ಧಾತ್ಮಕ ಮನಸ್ಥಿತಿಯನ್ನು ಆಧರಿಸಿ ಬಿಸಿಸಿಐ ಆಯ್ಕೆ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಕರುಣ್‌ ನಾಯರ್‌ ಪರ ಅಗರ್ಕರ್‌ ಬ್ಯಾಟಿಂಗ್‌

“ಭಾರತ ಟೆಸ್ಟ್‌ ತಂಡದ ವಿಚಾರದಲ್ಲಿ ಕೆಲವರಿಗೆ ನ್ಯಾಯ ಸಿಕ್ಕಿರಬಹುದು, ಇನ್ನು ಕೆಲವರಿಗೆ ಅನ್ಯಾಯ ಆಗಿರಬಹುದು. ಆದರೆ, ಪ್ರಸ್ತುತ ಸನ್ನಿವೇಶದಲ್ಲಿ ಕರುಣ್‌ ನಾಯರ್‌ ಅವರು ಉತ್ತಮವಾಗಿ ರನ್‌ಗಳನ್ನು ಕಲೆ ಹಾಕಿದ್ದಾರೆ. ಅವರು ಇಂಗ್ಲೆಂಡ್‌ನಲ್ಲಿ ಕೌಂಟಿ ಕ್ರಿಕೆಟ್‌ ಕೂಡ ಆಡಿದ್ದಾರೆ,” ಎಂದು ಅಜಿತ್‌ ಅಗರ್ಕರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇಂಗ್ಲೆಂಡ್‌ ಪ್ರವಾಸಕ್ಕಾಗಿ ಸರ್ಫರಾಝ್‌ ಖಾನ್‌ ಸಾಕಷ್ಟು ತಯಾರಿಯನ್ನು ನಡೆಸಿದ್ದರು. ಅವರು ತಮ್ಮ ದೇಹದ ತೂಕದಲ್ಲಿ 10 ಕೆಜಿ ಇಳಿಸಿಕೊಂಡಿದ್ದರು. ಆದರೆ, ಬಿಸಿಸಿಐ ಆಯ್ಕೆ ಸಮಿತಿಯು, ಮುಂಬೈ ಬ್ಯಾಟ್ಸ್‌ಮನ್‌ಗೆ ಅವಕಾಶ ನೀಡದೆ ನಿರಾಶೆಯನ್ನು ಮೂಡಿಸಿದೆ.

Karun Nair: 8 ವರ್ಷಗಳ ಬಳಿಕ ಟೆಸ್ಟ್‌ ತಂಡಕ್ಕೆ ಗ್ರೇಟೆಸ್ಟ್‌ ಕಮ್‌ಬ್ಯಾಕ್‌ ಮಾಡಿದ ಕನ್ನಡಿಗ!

ಭಾರತ ತಂಡಕ್ಕೆ ಅನುಭವಿ ಬ್ಯಾಟ್ಸ್‌ಮನ್‌ ಅಗತ್ಯವಿದೆ

“ಕೆಲವೊಮ್ಮೆ ನೀವು ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸರ್ಫರಾಝ್‌ ಖಾನ್‌, ಅವರು ನ್ಯೂಜಿಲೆಂಡ್‌ ವಿರುದ್ಧ ಮೊದಲನೇ ಟೆಸ್ಟ್‌ನಲ್ಲಿ ಶತಕ ಸಿಡಿಸಿದ್ದರು ಹಾಗೂ ನಂತರ ಅವರು ರನ್‌ ಗಳಿಸಿರಲಿಲ್ಲ ಎಂಬುದು ಗೊತ್ತಿದೆ. ಕೆಲವೊಮ್ಮೆ ಇಂಥಾ ನಿರ್ಧಾರಗಳನ್ನು ಟೀಮ್‌ ಮ್ಯಾನೇಜ್‌ಮೆಂಟ್‌ ತೆಗೆದುಕೊಳ್ಳಲಿದೆ. ಇದೇ ವೇಳೆ ದೇಶಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ರನ್‌ ಗಳಿಸಿದ್ದಾರೆ, ಅವರು ಸ್ವಲ್ಪ ಟೆಸ್ಟ್‌ ಕ್ರಿಕೆಟ್‌ ಆಡಿದ ಅನುಭವವನ್ನು ಹೊಂದಿದ್ದಾರೆ. ವಿರಾಟ್‌ ಕೊಹ್ಲಿಯ ಅನುಪಸ್ಥಿತಿಯಲ್ಲಿ ನಾವು ಸ್ವಲ್ಪ ಅನುಭವಿ ಆಟಗಾರನನ್ನು ನೋಡುತ್ತಿದ್ದೇವೆ,” ಎಂದು ಅಜಿತ್‌ ಅಗರ್ಕರ್‌ ಸ್ಪಷ್ಟನೆ ನೀಡಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »