Karunadu Studio

ಕರ್ನಾಟಕ

Corona Cases: ರಾಜ್ಯದಲ್ಲಿಂದು 9 ಮಂದಿಗೆ ಕರೋನಾ ಪಾಸಿಟಿವ್;‌ ಸಕ್ರಿಯ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆ – Kannada News | 9 people tested positive for corona as of May 25


ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9 ಮಂದಿಗೆ ಕರೋನಾ ಪಾಸಿಟಿವ್ (Corona Cases) ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಭಾನುವಾರ 104 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 9 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 47 ಸಕ್ರಿಯ ಪ್ರಕರಣಗಳಿದ್ದು, 46 ಮಂದಿ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪಾಸಿಟಿವಿಟಿ ದರ ಶೇ. 8.65 ಇದೆ.

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ಮತ್ತೆ ಸದ್ದು ಮಾಡುತ್ತಿರುವುದರಿಂದ ಉಸಿರಾಟದ ಸಮಸ್ಯೆ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್​ ಟೆಸ್ಟ್​ ಮಾಡುವಂತೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಕೋವಿಡ್ -19 ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ.

RT-PCR ಮತ್ತು RAT ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಿಗೆ ಕೋವಿಡ್ ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್‌ಗಳನ್ನು FIFO (First In First Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ / ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.

  • ಎಲ್ಲಾ SARI ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
  • ವಯೋವೃದ್ಧರಲ್ಲಿ ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
  • ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »