Karunadu Studio

ಕರ್ನಾಟಕ

Karnataka Rains: ಇಂದು ಕರಾವಳಿ, ದಕ್ಷಿಣ ಒಳನಾಡಲ್ಲಿ ಭಾರಿ ಮಳೆ ಸಾಧ್ಯತೆ, Red Alert; ನದಿ ಪಾತ್ರಗಳಲ್ಲಿ ಪ್ರವಾಹ ಎಚ್ಚರಿಕೆ – Kannada News | Heavy rain is likely in the coastal and southern interior on 27th May 2025


ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭರ್ಜರಿ ಮಳೆಯಾಗುವ (Karnataka Rains) ಮುನ್ಸೂಚನೆ ಸಿಕ್ಕಿದೆ. ಇಂದು (ಮೇ 27) ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅತಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಈ ಭಾಗದ ನದಿ-ತೊರೆಗಳಲ್ಲಿ ಒಳಹರಿವು ಹೆಚ್ಚಾಗಲಿದೆ. ಪ್ರವಾಹ ಪರಿಸ್ಥಿತಿ ತಲೆದೋರುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಇನ್ನು ಮೇ 29 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳು ಉಲ್ಬಣಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮೇ 27ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮೇ 28ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಹಾವೇರಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಗದಗ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Karnataka Rains: ಶಿರಾಡಿ ಘಾಟ್‌ನಲ್ಲಿ ಭೂ ಕುಸಿತ, ಸಂಚಾರಕ್ಕೆ ಅಡಚಣೆ; ಸಕಲೇಶಪುರದಲ್ಲಿ ಹೋಟೆಲ್ ಗೋಡೆ ಬಿದ್ದು ನಾಲ್ವರಿಗೆ ಗಾಯ

ಮೇ 29 ಮತ್ತು 30ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಹಾವೇರಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಗದಗ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು. ರಾಮನಗರ, ತುಮಕೂರು ಮತ್ತು ವಿಜಯನಗರ ಭಾರಿ ಮಳೆಯಾಗುವ ಸಾಧ್ಯತೆ ಇದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »