Karunadu Studio

ಕರ್ನಾಟಕ

Bengaluru News: ಅಕ್ರಮವಾಗಿ ನಡೆಯುತ್ತಿರುವ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಬಾರದು : ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಹಮೀದ್ ಪಾಷ ಮನವಿ – Kannada News | Students should not be admitted to an illegally run school: Social activist Abdul Hamid Pasha appeals


ಅಕ್ರಮಮ ಶಾಲೆಯ ಮಾನ್ಯತೆ ನವೀಕರಣ ರದ್ದು ಮಾಡುವಂತೆ ಶಿಕ್ಷಣ ಇಲಾಖೆಯ ತ್ರಿಸದಸ್ಯ ಸಮಿತಿ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು ಆಯುಕ್ತರಿಗೆ ಶಿಫಾರಸ್ಸು

ಬೆಂಗಳೂರು: ಸಾಮರ್ ಇಂಟರ್ನ್ಯಾಷನಲ್ ಇಸ್ಲಾಮಿಕ್ ಶಾಲೆಯ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ರದ್ದು ಮಾಡುವಂತೆ ಶಿಕ್ಷಣ ಇಲಾಖೆಯ ತ್ರಿಸದಸ್ಯ ಸಮಿತಿ , ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು ಆಯುಕ್ತರಿಗೆ ಶಿಫಾರಸ್ಸು ಮಾಡಿದ್ದು, ಮುಂಬರುವ ಶೈಕ್ಷಣಿಕ ವರ್ಷಕ್ಕೆ ಪೋಷಕರು ತಮ್ಮ ಮಕ್ಕಳನ್ನು ಸದರಿ ಶಾಲೆಗೆ ಸೇರಿಸಬಾರದು ಎಂದು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಹಮೀದ್ ಪಾಷ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಬಾಹಿರವಾಗಿ ಶಿಕ್ಷಣ ಸಂಸ್ಥೆ ನಡೆಯು ತ್ತಿರುವ ಕುರಿತು ದಾಖಲೆ ಸಮೇತ ಹಲವು ದೂರುಗಳನ್ನು ಸಲ್ಲಿಸಲಾಗಿದೆ. ದೂರಿನನ್ವಯ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರ ಕಛೇರಿ, ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್ 7(ಎ) 39 ರನ್ವಯ ಶಾಲೆಗೆ ನೀಡಿರುವ ಮಾನ್ಯತೆ ಹಿಂಪಡೆಯಲು ಹಾಗೂ ನಿಯಮ-34ರ ಪ್ರಕಾರ ಈ ಶಾಲೆಗೆ ನೀಡಿರುವ ನೊಂದಣಿಯನ್ನು ರದ್ದುಪಡಿಸಲು ಮೇಲಾಧಿಕಾ ರಿಗಳಿಗೆ ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ: Bangalore News: ಭೂತಾನ್‌ನ ಬೋಧನಾ ಸಮುದಾಯಕ್ಕಾಗಿ ಸ್ಯಾಮ್‌ಸಂಗ್ ‘ಗ್ಯಾಲಕ್ಸಿ ಸಬಲೀಕರಣ’ ಇಮ್ಮರ್ಸಿವ್ ಕಾರ್ಯಕ್ರಮ ಪ್ರಾರಂಭ

ಶಾಲೆ ಆರಂಭಕ್ಕೂ ಮುನ್ನ ಸೂಕ್ತ ಕ್ರಮ ತೆಗೆದುಕೊಳ್ಳವಂತೆ ಇದೇ ಮೇ 26 ರಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಅಕ್ರಮವಾಗಿ ನಡೆಯುತ್ತಿರುವ ಶಾಲೆಯಲ್ಲಿ ಯಾವುದೇ ಕಾರಣಕ್ಕೂ ಪ್ರವೇಶ ಪಡೆಯಬಾರದು ಎಂದು ಕಳಕಳಿಯಿಂದ ಮನವಿ ಮಾಡು ತ್ತಿರುವುದಾಗಿ ಹೇಳಿದರು.

ಶಾಲೆಯ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ರದ್ದುಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ, ಉಪನಿರ್ದೇಶಕರುಗಳನ್ನೊಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರು ಅಭಿಪ್ರಾಯ ನೀಡಿ ಮಾನ್ಯ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆಗೆ 26/5/2025 ರಂದು ಶಿಫಾರಸ್ಸು ಮಾಡಿರುತ್ತಾರೆ. ಈ ಶಾಲೆ ಜಾಗದಲ್ಲಿ ಅನುಮತಿ ಇಲ್ಲದೇ ಮದರಸ ಸಹ ನಡೆಯುತ್ತಿದೆ. ಈ ಶಾಲೆಗೆ ಮಕ್ಕಳನ್ನು ನೋಂದಾ ಯಿಸುವ ಪೋಷಕರು ತುಂಬಾ ಎಚ್ಚರಿಕೆಯಿಂದಿರಬೇಕು. ಮಕ್ಕಳ ಹಿತದೃಷ್ಟಿಯಿಂದ ಹಾಗೂ ಮಕ್ಕಳ ಮುಂದಿನ ಭವಿಷ್ಯದ ಸಲುವಾಗಿ ಅಕ್ರಮವಾಗಿ, ದಬ್ಬಾಳಿಕೆ, ದೌರ್ಜನ್ಯದಿಂದ ನಡೆಯು ತ್ತಿರುವ ಶಾಲೆಯನ್ನು ತೆರವುಗೊಳಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

“ಜಾಮಿಯಾ ಮೊಹಮ್ಮದಿಯಾ ಮನ್ಸೂರ” ಎಂದು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದು, ಸರ್ಕಾರದಿಂದ ಮಾನ್ಯತೆ ಮತ್ತು ಅನುಮತಿ ಪಡೆದಿರುವುದಾಗಿ ತಿಳಿಸಿದೆ. ಆದರೆ ಶಾಲೆಯ ಬಗ್ಗೆ ಇಲಾಖಾ ವಿಚಾರಣೆ ಹಂತದಲ್ಲಿ “ಜಾಮಿಯಾ ಮೊಹಮ್ಮದಿಯಾ ಮನ್ಸೂರ” ಎಂಬ ಸಂಸ್ಥೆ ನೋಂದಣಿಯಾಗಿಲ್ಲ ಎಂದು ಈ ಸಂಸ್ಥೆಯವರು ಲಿಖಿತವಾಗಿ ಇಲಾಖೆಗೆ ಮಾಹಿತಿ ನೀಡಿದೆ. ಮದರಸಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕಾನೂನು ಬಾಹಿರವಾಗಿ 10 ಲಕ್ಷ ರೂ ಅನುದಾನ ಪಡೆದಿದ್ದು, ಈ ಮೂಲಕ ರಾಜ್ಯ ಸರ್ಕಾರವನ್ನೇ ವಂಚಿಸಿ ಅಕ್ರಮಗಳನ್ನು ನಡೆಸುತ್ತಿದೆ ಎಂದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »