Karunadu Studio

ಕರ್ನಾಟಕ

PBKS vs MI Qualifier 2: ಪಿಚ್‌ ರಿಪೋರ್ಟ್‌, ಹವಾಮಾನ ವರದಿ, ಸಂಭಾವ್ಯ ತಂಡ ಹೇಗಿದೆ? – Kannada News | PBKS vs MI Match Pitch Report, Predicted Playing XIs and weather report


ಅಹಮದಾಬಾದ್‌: ಭಾನುವಾರ ನಡೆಯುವ ಐಪಿಎಲ್‌ ಕ್ವಾಲಿಫೈಯರ್‌-2(IPL 2025 Qualifier 2,) ಹೈವೋಲ್ಟೇಜ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌(PBKS vs MI Qualifier 2) ಮತ್ತು ಪಂಜಾಬ್‌ ಕಿಂಗ್ಸ್‌ ತಂಡಗಳು ಸೆಣಸಾಟ ನಡೆಸಲಿವೆ. ಗೆದ್ದ ತಂಡ ಫೈನಲ್‌ ಪ್ರವೇಶಿಸಿದರೆ ಸೋತ ತಂಡ ಮೂರನೇ ಸ್ಥಾನಿಯಾಗಿ ಟೂರ್ನಿಗೆ ಅಂತ್ಯ ಹಾಡಲಿದೆ. ಈ ಪಂದ್ಯದ ಪಿಚ್‌ ರಿಪೋರ್ಟ್‌, ಹವಾಮಾನ ವರದಿ ಮತ್ತು ಸಂಭಾವ್ಯ ಆಡುವ ಬಳಗದ ಮಾಹಿತಿ ಇಲ್ಲಿದೆ.

ಪಿಚ್‌ ರಿಪೋರ್ಟ್‌

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ(Narendra Modi Stadium Pitch Report) ಹಾಲಿ ಆವೃತ್ತಿಯಲ್ಲಿ ನಡೆದ ಐಪಿಎಲ್ ಪಂದ್ಯಗಳಲ್ಲಿ ಬಹುತೇಕ ದೊಡ್ಡ ಮೊತ್ತ ದಾಖಲಾಗಿದೆ. ಪಿಚ್‌ ವರ್ತನೆ ಸಂಪೂರ್ಣವಾಗಿ ಬ್ಯಾಟಿಂಗ್‌ಗೆ ಸಹಕಾರಿಯಾದ ಕಾರಣ ಇಲ್ಲಿ 200 ಮೊತ್ತ ಸರ್ವೆ ಸಾಮಾನ್ಯ. ಚೇಸಿಂಗ್ ನಡೆಸುವ ತಂಡಗಳಿಗೆ ಹೆಚ್ಚಿನ ಅವಕಾಶ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಹವಾಮಾನ ವರದಿ

ಪಂದ್ಯಕ್ಕೆ ಯಾವುದೇ ಮಳೆ ಭೀತಿ ಇಲ್ಲ. ಆದರೆ ರಾತ್ರಿಯ ವೇಳೆ ಕೊಂಚ ಇಬ್ಬನಿ ಸಮಸ್ಯೆ ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಂದ್ಯದ ಆರಂಭದ ವೇಳೆ ತಾಪಮಾನ 26-28° ಸೆಲ್ಸಿಯಸ್‌ ಇರಲಿದೆ. ಇಬ್ಬನಿ ಇರುವುದರಿಂದ ಎರಡನೇ ಇನಿಂಗ್ಸ್‌ ಬ್ಯಾಟಿಂಗ್ ಮಾಡುವ ತಂಡಕ್ಕೆ ಅನುಕೂಲಕರವಾಗಿರುತ್ತದೆ.

ಸಂಭಾವ್ಯ ತಂಡಗಳು

ಪಂಜಾಬ್‌ ಕಿಂಗ್ಸ್‌: ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್, ಜೋಶ್ ಇಂಗ್ಲಿಸ್ (ವಿ.ಕೀ.), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋಯಿನಿಸ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಕೈಲ್ ಜೇಮಿಸನ್, ಅರ್ಶ್‌ದೀಪ್‌ ಸಿಂಗ್.

ಇಂಪ್ಯಾಕ್ಟ್‌ ಆಟಗಾರ: ವಿಜಯಕುಮಾರ್ ವೈಶಾಕ್

ಇದನ್ನೂ ಓದಿ IPL 2025: ಸಿಕ್ಸರ್‌ ದಾಖಲೆ ಬರೆದ ಹಿಟ್‌ಮ್ಯಾನ್‌ ರೋಹಿತ್‌

ಮುಂಬೈ ಇಂಡಿಯನ್ಸ್‌: ಜಾನಿ ಬೈರ್‌ಸ್ಟೋವ್ (ವಿ.ಕೀ.), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ರಾಜ್ ಬಾವಾ, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್‌ ಬುಮ್ರಾ, ರಿಚರ್ಡ್ ಗ್ಲೀಸನ್.

ಇಂಪ್ಯಾಕ್ಟ್‌ ಆಟಗಾರ: ಅಶ್ವನಿ ಕುಮಾರ್



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »