Karunadu Studio

ಕರ್ನಾಟಕ

World Tobacco Free Day: ನಮ್ಮ ಕ್ಲಿನಿಕ್ 2 ವತಿಯಿಂದ ವಿಶ್ವ ‘ತಂಬಾಕು ರಹಿತ ದಿನಾಚರಣೆಯ ಜಾಗೃತಿ – Kannada News | Namma Clinic 2 raises awareness on World No Tobacco Day


ಬಾಗೇಪಲ್ಲಿ: ಮೇ 31 ವಿಶ್ವ ‘ತಂಬಾಕು ರಹಿತ ದಿನ’. ತಂಬಾಕು ಸೇವನೆಯು ಮನುಷ್ಯನ ಮೇಲೆ ಉಂಟುಮಾಡುವ ದುಷ್ಪರಿಣಾಮಗಳನ್ನು ಯುವ ಸಮುದಾಯಕ್ಕೆ ಮನಮುಟ್ಟುವಂತೆ ತಿಳಿಸಿ ಹೇಳಬೇಕಾಗಿರುವುದು ಇಂದಿನ ಅಗತ್ಯತೆ ಇದೆ ಎಂದು  ಬಾಗೇಪಲ್ಲಿ ಪಟ್ಟಣದ ನಮ್ಮ ಕ್ಲಿನಿಕ್ ೨ ಡಾ. ಪವನ್ ರೆಡ್ಡಿ ಹೇಳಿದರು.

ಅವರು ಪಟ್ಟಣದ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ತಂಬಾಕು ದಿನಾಚರಣೆಯ ಅಂಗವಾಗಿ ಮಕ್ಕಳಲ್ಲಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ತಂಬಾಕು ಸೇವನೆಯಿಂದ ಯುವ ಪೀಳಿಗೆಯನ್ನು ರಕ್ಷಿಸುವುದು ಹೇಗೆ ಎಂಬ ಬಗ್ಗೆ ಯೋಜನೆಗಳನ್ನು ರೂಪಿಸುವುದರ ಜತೆಗೆ ಅವರಲ್ಲಿ ಈ ಬಗ್ಗೆ ಅರಿವು ಮೂಡಿಸಿ, ತಂಬಾಕು ನಿಯಂತ್ರಣದ ವಿಚಾರದಲ್ಲಿ ನೂತನ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಮಾಜ ಒಟ್ಟಾಗಿ ಪಣ ತೊಡಬೇಕಾಗಿದೆ.

ಇದನ್ನೂ ಓದಿ: Chikkaballapur News: ವಿಚಕ್ಷಣ ಜಾಗೃತ ದಳ ಸಿಬ್ಬಂದಿ ನೇಮಕಾತಿ ಸುತ್ತೋಲೆ ವಾಪಸ್ಸು ಪಡೆಯಲಿ : ಅತಿಥಿ ಉಪನ್ಯಾಸಕ ಸಂಘ ಆಗ್ರಹ

ತಂಬಾಕು ಸೇವನೆಯ ದುಶ್ಚಟಕ್ಕೆ ದಾಸರಾಗಿ ವಿಶ್ವದಲ್ಲಿ ಪ್ರತಿವರ್ಷ ಸುಮಾರು ೮೦ ಲಕ್ಷ ಜನರು ಸಾಯುತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ. ಭಾರತದಲ್ಲಿ ೧೩ ಲಕ್ಷಕ್ಕೂ ಹೆಚ್ಚು ಜನರು ತಂಬಾಕಿನ ದುಷ್ಪರಿಣಾಮಗಳಿಗೆ ಬಲಿಯಾಗುತ್ತಿದ್ದಾರೆ. ಯುವ ಪೀಳಿಗೆಯು ತಂಬಾಕಿನ ದುಶ್ಚಟಕ್ಕೆ ಬೀಳುವುದನ್ನು ತಡೆಯುವುದು ಒಂದು ಸವಾಲಾಗಿದ್ದರೆ, ಈಗಾಗಲೇ ಈ ದುಶ್ಚಟಕ್ಕೆ ಒಳಗಾದ ವರನ್ನು ಅದರಿಂದ ಹೊರತರುವುದು ಇನ್ನೂ ದೊಡ್ಡ ಸವಾಲಾಗಿದೆ ಎಂದು ಹೇಳಿದರು.

ಬೀಡಿ, ಸಿಗರೇಟು, ಗುಟ್ಕಾ, ಜರ್ದಾ, ನಶ್ಯಾ, ಹುಕ್ಕಾ… ಹೀಗೆ ಅನೇಕ ರೀತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸಲಾಗುತ್ತಿದೆ. ತಂಬಾಕಿನಲ್ಲಿರುವ ೧೦೦ ವಿಷಕಾರಕ ಹಾಗೂ ೭೦ ಕ್ಯಾನ್ಸರ್‌ ಕಾರಕ ರಾಸಾಯನಿಕಗಳು ಶ್ವಾಸಕೋಷದ ಕ್ಯಾನ್ಸರ್, ಅನ್ನನಾಳದ ಕ್ಯಾನ್ಸರ್, ನಾಲಗೆ, ಗಂಟಲಿನ ಕ್ಯಾನ್ಸರ್, ದೀರ್ಘಕಾಲದ ಕೆಮ್ಮು, ಶ್ವಾಸಕೋಶದ ಸೋಂಕು, ಹೀಗೆ ಹಲವಾರು ಗುಣಪಡಿಸಲಾಗದ ಭಯಂಕರ ರೋಗಗಳಿಗೆ ಕಾರಣವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರ್.ಹನುಮಂತ ರೆಡ್ಡಿ ,ಮುಖ್ಯ ಶಿಕ್ಷಕ ಶ್ರೀನಿವಾಸ್, ಕೆ.ವಿ.ಶ್ರೀನಿವಾಸ್, ಈಶ್ವರಪ್ಪ ನಾಗರಾಜು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »