Karunadu Studio

ಕರ್ನಾಟಕ

Chikkaballapur News: ಚಲನಚಿತ್ರಗಳಲ್ಲಿ ತಂಬಾಕು ಬಳಕೆಯ ಚಿತ್ರಣಗಳ ತೋರಿಸುವುದು ಯುವಜನತೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ : ನ್ಯಾ.ಬಿ. ಶಿಲ್ಪ ಅಭಿಮತ – Kannada News | Showing depictions of tobacco use in films has a bad effect on the youth: Justice B. Shilpa Ahimata


ಚಿಕ್ಕಬಳ್ಳಾಪುರ: ಚಲನಚಿತ್ರಗಳಲ್ಲಿ ನಟರು ಮತ್ತು ಕಲಾವಿದರು ಅಭಿನಯಿಸುವ ತಂಬಾಕು ಸೇವನೆಯ ದೃಶ್ಯಾವಳಿಗಳನ್ನು ನೋಡಿ ಕುತೂಹಲಕ್ಕೆ ಒಳಗಾಗಿ ಯುವಜನತೆ ತಂಬಾಕು ಉತ್ಪನ್ನ ಗಳ ಸೇವನೆಯ ದಾಸರಾಗುತ್ತಿರುವುದು ಹೆಚ್ಚಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ ಅಭಿಪ್ರಾಯ ಪಟ್ಟರು.

ನಗರದ ಎಂ.ಜಿ.ರಸ್ತೆಯಲ್ಲಿರುವ ಸರಕಾರಿ ಪದವಿ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಚಿಕ್ಕಬಳ್ಳಾಪುರ ಜಿಲ್ಲೆ. ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಅಯೋಜಿಸಿದ್ದ “ವಿಶ್ವ ತಂಬಾಕು ರಹಿತ ದಿನಾಚರಣೆ”ಯ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿಗೆ ವಂತಿಗೆ ಪಾವತಿಸುವುದು ಕಡ್ಡಾಯ

ಚಲನಚಿತ್ರ ನಿರ್ಮಾಪಕರುಗಳು ತಾವು ನಿರ್ಮಿಸುವ ಚಲನಚಿತ್ರಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯ ಚಿತ್ರಣಗಳನ್ನು ಅಲ್ಪ ಅವಧಿಯಲ್ಲಿ ತೋರಿಸಿ ಅದರಿಂದ ಆಗುವ ದುಷ್ಪರಿಣಾಮಗಳನ್ನು ಹಾಗೂ ಆರೋಗ್ಯದ ಮೇಲಾಗುವ ಪರಿಣಾಮಗಳನ್ನು ದೀರ್ಘ ಅವಧಿಯಲ್ಲಿ ತೋರಿಸಿ ಜಾಗೃತಿ ಮೂಡಿಸುವ ಸಾಮಾಜಿಕ ಜವಾಬ್ದಾರಿ ತೋರಬೇಕು ಎಂದರು.

ವಿಶ್ವ ‘ತಂಬಾಕು ರಹಿತ ದಿನ’. ತಂಬಾಕು ಸೇವನೆಯು ಮನುಷ್ಯನ ಮೇಲೆ ಉಂಟುಮಾಡುವ ದುಷ್ಪರಿಣಾಮಗಳನ್ನು ಯುವ ಸಮುದಾಯಕ್ಕೆ ಮನಮುಟ್ಟುವಂತೆ ತಿಳಿಸಿ ಹೇಳಬೇಕಾಗಿರುವುದು ಇಂದಿನ ಅಗತ್ಯವಾಗಿದೆ. ತಂಬಾಕು ಸೇವನೆಯಿಂದ ಯುವ ಪೀಳಿಗೆಯನ್ನು ರಕ್ಷಿಸುವುದು ಹೇಗೆ ಎಂಬ ಬಗ್ಗೆ ಯೋಜನೆಗಳನ್ನು ರೂಪಿಸುವುದರ ಜತೆಗೆ ಅವರಲ್ಲಿ ಈ ಬಗ್ಗೆ ಅರಿವು ಮೂಡಿಸಿ, ತಂಬಾಕು ನಿಯಂತ್ರಣದ ವಿಚಾರದಲ್ಲಿ ನೂತನ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಮಾಜ ಒಟ್ಟಾಗಿ ಪಣ ತೊಡಬೇಕಾಗಿದೆ ಎಂದರು.

ಪ್ರತಿ ವರ್ಷ ಮೇ ೩೧ ರಂದು ಜಾಗತಿಕವಾಗಿ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದೆ. ಈ ವರ್ಷದ ಘೋಷ  ವಾಕ್ಯ “ “ಮನವಿಯನ ಬಹಿರಂಗ ಪಡಿಸುವುದು: ತಂಬಾಕು ಮತ್ತು ನಿಕೋ ಟಿನ್ ಉತ್ಪನ್ನಗಳ ಮೇಲೆ ಉದ್ಯಮ ತಂತ್ರಗಳನ್ನು ಬಹಿರಂಗಪಡಿಸುವುದು” ಈ ಮೂಲಕ ಶಾಲಾ/ಕಾಲೇಜು ಮಕ್ಕಳು/ಹದಿಹರೆಯದವರನ್ನು ತಂಬಾಕಿನಿಂದ ದೂರವಿರಿಸುವುದು ಅತಿ ಮುಖ್ಯ ಎಂಬುದರ ಬಗ್ಗೆ ತಿಳಿವಳಿಕೆ ಮೂಡಿಸಿ ಆರೋಗ್ಯ ಶಿಕ್ಷಣ ನೀಡುವುದಾಗಿದೆ ಎಂದು ಹೇಳಿದರು.

ಕರ್ನಾಟಕವು ದೇಶದಲ್ಲಿ ೨ ನೇ ಅತಿ ಹೆಚ್ಚು ತಂಬಾಕನ್ನು ಬೆಳೆಯುವ ರಾಜ್ಯವಾಗಿದೆ. ಇತ್ತೀಚಿನ ದಿನಮಾನಗಳಲ್ಲಿ ಯುವಪೀಳಿಗೆಯು ತಂಬಾಕು ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಇದರಿಂದಾಗಿ ಮೇ-೩೧ ರ ವಿಶ್ವ ತಂಬಾಕು ರಹಿತ ದಿನದ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಹಾಗೂ ಮಕ್ಕಳಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮೇಲೆ ಉದ್ಯಮ ತಂತ್ರಗಳನ್ನು ಬಹಿರಂಗಪಡಿಸುವುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮಾತನಾಡುತ್ತಾ ತಂಬಾಕು ಸೇವನೆಯಿಂದ ವರ್ಷಕ್ಕೆ ೮ ದಶಲಕ್ಷಕ್ಕೂ ಹೆಚ್ಚು ಜನರನ್ನು ಕೊಲ್ಲುತ್ತದೆ. ಅವುಗಳಲ್ಲಿ ೭ ಮಿಲಿಯನ್‌ಗಿಂತಲೂ ಹೆಚ್ಚು ಸಾವುಗಳು ನೇರ ತಂಬಾಕು ಸೇವನೆಯಿಂದ ಉಂಟಾಗುತ್ತವೆ. ಅದೇ ಸಮಯದಲ್ಲಿ, ಮಿಲಿಯನ್ಗಳಷ್ಟು ಜನ  ಧೂಮಪಾನಿಗಳಲ್ಲದವರು ಸೆಕೆಂಡ್ ಹ್ಯಾಂಡ್ ಹೊಗೆಗೆ (ನಿಷ್ಕ್ರಿಯ ಧೂಮಪಾನ) ಒಡ್ಡಿಕೊಳ್ಳುವುದರ ಪರಿಣಾಮವಾಗಿದೆ. ತಂಬಾಕು ಉತ್ಪನ್ನಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕಗಳಿದ್ದು, ಇದರ ಸೇವನೆಯಿಂದಾಗಿ ಬಾಯಿ ಕ್ಯಾನ್ಸರ್, ಶ್ವಾಸ ಕೋಶದ ಕ್ಯಾನ್ಸರ್, ಧ್ವನಿಪೆಟ್ಟಿಗೆ ಕ್ಯಾನ್ಸರ್ ಹಾಗೂ ಅನ್ನನಾಳ ಕ್ಯಾನ್ಸರ್ ನಂತಹ ಖಾಯಿಲೆಗಳಿಗೆ ಹೆಚ್ಚಾಗಿ ತುತ್ತಾಗುತ್ತಿದ್ದಾರೆ ಎಮದು ಎಚ್ಚರಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಶಿಕ್ಷಣ ಸಂಸ್ಥೆಗಳ ೧೦೦ ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಮೊಬೈಲ್ ಮೂಲಕ ಕಾನೂನು ಬಾಹಿರ ತಂಬಾಕು ಉತ್ಪನ್ನಗಳ ಮಾರಾಟದ ಮೇಲೆ ಪ್ರಕರಣ ದಾಖಲಿಸಲು ಆಂಡ್ರೆಡ್ ಆಪ್ಲಿಕೇಷನ್ ಪರಿಚಯಿಸಲಾಗಿದೆ. ತಂಬಾಕು ಸೇವನೆ ಮಾಡುವುದು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ತಿಳಿದಿದ್ದರೂ ಕೂಡ ಇದರ ಸೇವನೆ ಮಾಡುವವರ ಸಂಖ್ಯೆ ಎಳ್ಳಷ್ಟು ಕಡಿಮೆಯಾಗಿಲ್ಲ. ಅದಕ್ಕಾಗಿಯೇ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ತಂಬಾಕು ನಿಷೇಧ ದಿನ ಅಥವಾ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಈ ವೇಳೆ ನಂದಿ ವೈದ್ಯಕಿಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಇವರ ವತಿಯಿಂದ ತಂಬಾಕು ನಿಯಂತ್ರಣದ ಕಿರು ನಾಟಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್ ಎಸ್ ಮಹೇಶ್ ಕುಮಾರ್, ಜಿಲ್ಲಾ ಸರ್ವೇಕ್ಷಾಧಿಕಾರಿ ಡಾ. ಕೃಷ್ಣಪ್ರಸಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಎಂ ವೆಂಕಟೇಶ್, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಆರ್.ಸಿ.ಎಚ್ ಅಧಿಕಾರಿ ಡಿ.ಟಿ ಉಮಾ, ತಾಲೂಕು ಆರೋಗ್ಯ ಅಧಿಕಾರಿ ಡಾ.ಕೆ.ಮಂಜುಳಾ, ಜಿಲ್ಲಾಸ್ಪತ್ರೆಯ ಮನೋವೈದ್ಯರು ಡಿ.ಎನ್ ಕಿಶೋರ್,ಪ್ರಾಂಶುಪಾಲರು ಡಾ. ವಸುಂದರ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತ ರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »