Karunadu Studio

ಕರ್ನಾಟಕ

PBKS vs MI: ಇಂದಿನ ಕ್ವಾಲಿಫೈಯರ್‌-2 ಪಂದ್ಯಕ್ಕೆ ಭಾರೀ ಮಳೆ ಎಚ್ಚರಿಕೆ; ಪಂದ್ಯ ರದ್ದಾಗುವ ಸಾಧ್ಯತೆ! – Kannada News | PBKS vs MI: What happens if IPL 2025 Qualifier 2 gets washed out in Ahmedabad?


ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಇಂದು ನಡೆಯಬೇಕಿರುವ ಐಪಿಎಲ್‌ ಟೂರ್ನಿಯ ಸೆಮಿಫೈನಲ್‌ ಮಾದರಿಯ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳು ಸೆಣಸಾಟ ನಡೆಸಲಿವೆ. ಆದರೆ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿದೆ. ಶನಿವಾರವೇ ಅಹಮದಾಬಾದ್‌ನಲ್ಲಿ ಮಳೆಯಾಗಿದ್ದು ಉಭಯ ತಂಡಗಳ ಅಭ್ಯಾಸಕ್ಕೆ ಅಡ್ಡಿಪಡಿಸಿತ್ತು. ಹೀಗಾಗಿ ಭಾನುವಾರ ಕೂಡ ಮಳೆ ಖಚಿತ ಎನ್ನುವಂತಿದೆ. ಮಳೆ ಸುದ್ದಿ ಕೇಳಿ ಪಂಜಾಬ್‌ ನಿರಾಳವಾಗಿದ್ದರೆ ಅತ್ತ ಮುಂಬೈ ಪಾಳಯದಲ್ಲಿ ಆತಂಕ ಮನೆ ಮಾಡಿದೆ.

ಹೌದು, ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ ಮುಂಬೈ ಇಂಡಿಯನ್ಸ್‌ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು ಹೊರಬೀಳಲಿದೆ. ಕನಿಷ್ಠ 5 ಓವರ್‌ಗಳ ಪಂದ್ಯ ಅಥವಾ ಸೂಪರ್‌ ಓವರ್‌ ಕೂಡ ನಡೆಯದಿದ್ದರೆ, ಆಗ ಅಂಕಪಟ್ಟಿಯಲ್ಲಿ ಮೇಲಿನ ಸ್ಥಾನ ಪಡೆದ ತಂಡ ಮುನ್ನಡೆಯಲಿದೆ. ಈ ಲಾಭ ಪಂಜಾಬ್‌ ತಂಡಕ್ಕೆ ಸಿಗಲಿದೆ. ಕಾರಣ ಅಯ್ಯರ್‌ ಪಡೆ ಅಗ್ರಸ್ಥಾನಿಯಾಗಿತ್ತು. ಮುಂಬೈ ನಾಲ್ಕನೇ ಸ್ಥಾನ ಪಡೆದಿತ್ತು. ಈ ಪಂದ್ಯಕ್ಕೆ ಮೀಸಲು ದಿನ ಇರದಿದ್ದರೂ ಕೂಡ ಎರಡು ಗಂಟೆ ಹೆಚ್ಚುವರಿ ಸಮಯ ಮೀಸಲಿದೆ.

ಈಶಾನ್ಯ ಮತ್ತು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಮಳೆ ಮತ್ತು ಹಠಾತ್ ಪ್ರವಾಹದ ಸಾಧ್ಯತೆಯ ಬಗ್ಗೆ ಭಾರತ ಹವಾಮಾನ ಇಲಾಖೆ (IMD) ರೆಡ್ ಮತ್ತು ಆರೆಂಜ್ ಅಲರ್ಟ್ ಎಚ್ಚರಿಕೆಗಳನ್ನು ನೀಡಿದೆ. ಮೇಘಾಲಯ, ಅರುಣಾಚಲ ಪ್ರದೇಶ, ತ್ರಿಪುರ, ಅಸ್ಸಾಂ ಮತ್ತು ಸಿಕ್ಕಿಂನಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಇಲ್ಲಿ ಈಗಾಗಲೇ ಸಾವು ನೋವು ಸಂಭವಿಸಿದೆ. ದಕ್ಷಿಣ ಭಾರತದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಶನಿವಾರವೇ ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲಿ ಮಳೆ ಬಿರುಸುಗೊಂಡಿದೆ. ಹೀಗಾಗಿ ಇಂದಿನ ಪಂದ್ಯ ಸೇರಿ ಫೈನಲ್‌ ಪಂದ್ಯಕ್ಕೂ ಮಳೆ ಭೀತಿ ತಪ್ಪಿದ್ದಲ್ಲ.

ಇದನ್ನೂ ಓದಿ IPL 2025 final: ಐಪಿಎಲ್​ ಫೈನಲ್ ಪಂದ್ಯದ ಆಹ್ವಾನ ತಿರಸ್ಕರಿಸಿದ ಮೂರು ಸೇನಾ ಮುಖ್ಯಸ್ಥರು!

ಹೆಡ್-ಟು-ಹೆಡ್

ಪಂಜಾಬ್ ಮತ್ತು ಮುಂಬೈ ಇದುವರೆಗೆ ಪರಸ್ಪರ 32 ಐಪಿಎಲ್ ಪಂದ್ಯಗಳನ್ನು ಆಡಿವೆ. ಈ ಪೈಕಿ ಮುಂಬೈ ತಂಡ 17 ಮತ್ತು ಪಂಜಾಬ್‌ 15 ಪಂದ್ಯಗಳನ್ನು ಗೆದ್ದಿದೆ. ಹಾಲಿ ಆವೃತ್ತಿಯಲ್ಲಿ ಒಂದು ಆಡಿದ ಒಂದು ಪಂದ್ಯದಲ್ಲಿ ಪಂಜಾಬ್ ತಂಡ ಮುಂಬೈ ವಿರುದ್ಧ 7 ವಿಕೆಟ್‌ ಅಂತರದಿಂದ ಗೆದ್ದು ಬೀಗಿತ್ತು. ಈ ಸೋಲಿಗೆ ಮುಂಬೈ ಸೇಡು ತೀರಿಸಲು ಕಾದು ಕುಳಿತಿದೆ. ಆದರೆ ಪಂದ್ಯಕ್ಕೆ ಮಳೆ ಅನುವು ನೀಡಬೇಕಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »